
ಫತೇಘರ್ ಸಾಹಿಬ್: ಜಮ್ಮು-ಕಾಶ್ಮೀರದ ಪ್ಯಾಂಪೋರ್ ದಾಳಿ ಕುರಿತು ಪಾಕಿಸ್ತಾನವನ್ನು ಸ್ಪಷ್ಟವಾಗಿ ಉಲ್ಲೇಖ ಮಾಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ನೆರೆಯ ರಾಷ್ಟ್ರ ಭಾರತವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಜೂ.25 ರಂದು ನಡೆದ ಸೇನೆ- ಉಗ್ರರ ನಡುವಿನ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿರುವುದಕ್ಕೆ ಸೇನಾ ಪಡೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ರಾಜನಾಥ್ ಸಿಂಗ್, ಪ್ಯಾಂಪೋರ್ ನಲ್ಲಿ ಭದ್ರತೆಯ ಮೇಲ್ವಿಚಾರಣೆಗಾಗಿ ಇಬ್ಬರು ಸದಸ್ಯರ ಸಮಿತಿಯನ್ನು ಕಳಿಸಿದ್ದು ಮುಂದಿನ ದಿನಗಳಲ್ಲಿ ಯೋಧರು ಇಂತಹ ಘಟನೆಗಳಲ್ಲಿ ಹುತಾತ್ಮರಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಭಾರತವನ್ನು ಅಸ್ಥಿರಗೊಳಿಸಲು ನೆರೆ ರಾಷ್ಟ್ರ ಯತ್ನಿಸುತ್ತಿದ್ದು, ಭಾರತೀಯ ಯುವಕರು, ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡಬೇಕಿದೆ ಎಂದು ಕರೆ ನೀಡಿದ್ದಾರೆ. ಭಯೋತ್ಪಾದಕರು ಹಾಗೂ ನೆರೆಯ ರಾಷ್ಟ್ರ ಭಾರತವನ್ನು ಅಸ್ಥಿರಗೊಳಿಸುವ ಯತ್ನ ನಡೆಯುತ್ತಿದೆ. ಇಂತಹ ಯತ್ನಗಳನ್ನು ವಿಫಲಗೊಳಿಸುತ್ತಿರುವ ಸೇನಾಪಡೆಗೆ ಧಾನ್ಯವಾದ ತಿಳಿಸುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಪ್ಯಾಂಪೋರ್ ನಲ್ಲಿ ನಡೆದ ಉಗ್ರದಾಳಿಯಲ್ಲಿ ಮಡಿದ ಯೋಧರನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ರಾಜನಾಥ್ ಸಿಂಗ್ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.
Advertisement