ಜಮ್ಮು-ಕಾಶ್ಮೀರ: ಬರಾಮುಲ್ಲಾ ಜಿಲ್ಲೆಯಲ್ಲಿ ಗುಂಡಿನ ದಾಳಿ; ಇಬ್ಬರು ಉಗ್ರರ ಸಾವು

ಯೋಧರು ಮತ್ತು ಉಗ್ರಗಾಮಿಗಳ ಮಧ್ಯೆ ಗುಂಡಿನ ಚಕಮಕಿ ಮುಂದುವರಿದಿದ್ದು, ಭದ್ರತಾ ಪಡೆಗಳು ನಡೆಸಿದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬರಮುಲ್ಲಾ(ಜಮ್ಮು-ಕಾಶ್ಮೀರ): ಯೋಧರು ಮತ್ತು ಉಗ್ರಗಾಮಿಗಳ ಮಧ್ಯೆ ಗುಂಡಿನ ಚಕಮಕಿ ಮುಂದುವರಿದಿದ್ದು, ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಗೆ ಭಾನುವಾರ ಇಬ್ಬರು ಹತರಾಗಿದ್ದಾರೆ. ಈ ಪ್ರದೇಶದಲ್ಲಿ ಉಗ್ರಗಾಮಿಗಳ ಸಾಮೂಹಿಕ ಹುಡುಕಾಟ ಕಾರ್ಯಾಚರಣೆ ಮುಂದುವರಿದಿದೆ.

ಉತ್ತರ ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ಚಕಮಕಿ ಆರಂಭಗೊಂಡಿತ್ತು.

  17 ಜೆಎಕೆ ಆರ್ ಐಎಫ್ ನ ಸೈನಿಕರು ಮತ್ತು ಬರಮುಲ್ಲಾ ಪೊಲೀಸರು ಲಚಿಪೋರಾ ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಪಾಕಿಸ್ತಾನ ಮೂಲದ ಲಷ್ಕರ್ ಫಿದಾಯಿನ್ ಉಗ್ರರು ದಾಳಿ ನಡೆಸಿದ್ದರು.ಗುಂಡಿನ ದಾಳಿ ಇನ್ನೂ ಕೂಡ ಮುಂದುವರಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com