ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಹೊಣೆ ನಿರಾಕರಿಸಿದ ಶೀಲಾ ದೀಕ್ಷಿತ್: ಮೂಲಗಳು

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯ ಸಾರಥ್ಯ ವಹಿಸಲು ದೆಹಲಿಯಲ್ಲಿ ಮೂರು ಬಾರಿ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯೊಂದಿಗೆ ಶೀಲಾ ದೀಕ್ಷಿತ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯೊಂದಿಗೆ ಶೀಲಾ ದೀಕ್ಷಿತ್

ನವದೆಹಲಿ: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯ ಸಾರಥ್ಯ ವಹಿಸಲು ದೆಹಲಿಯಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖವಾಗಿ ಕೆಲಸ ಮಾಡಲು ಇಷ್ಟವಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯತಂತ್ರದ ಉಸ್ತುವಾರಿ ವಹಿಸಿಕೊಂಡಿರುವ ಪ್ರಶಾಂತ್ ಕಿಶೋರ್, ಉತ್ತರ ಪ್ರದೇಶದ ಉಸ್ತುವಾರಿಗೆ ಬ್ರಾಹ್ಮಣ ಸಮುದಾಯದ ನಾಯಕರ ಅಗತ್ಯವನ್ನು ಮುಂದಿಟ್ಟಿದ್ದರು. ಅದರಂತೆ ಶೀಲಾ ದೀಕ್ಷಿತ್ ಮುಂದೆ ಪ್ರಸ್ತಾಪವಿಟ್ಟಾಗ ಅವರು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ ಎಂದು ತಿಳಿದುಬಂದಿದೆ.

ಈ ತಿಂಗಳ ಆರಂಭದಲ್ಲಿ ಶೀಲಾ ದೀಕ್ಷಿತ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಹೊರಬಂದ ಶೀಲಾ ದೀಕ್ಷಿತ್ ಅವರನ್ನು ಸುದ್ದಿಗಾರರು ಮಾತನಾಡಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.

ಉತ್ತರ ಪ್ರದೇಶದ ಚುನಾವಣಾ ಉಸ್ತುವಾರಿಯನ್ನು ಶೀಲಾ ದೀಕ್ಷಿತ್ ಗೆ ವಹಿಸಲು ಕಾಂಗ್ರೆಸ್ ಮುಂದಾಗಿರುವುದಕ್ಕೆ ಪ್ರಮುಖ ಕಾರಣ ಅವರು ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿರುವುದು. ಅಲ್ಲದೆ ಅವರ ಕುಟುಂಬ ಹಿನ್ನೆಲೆ. ಶೀಲಾ ದೀಕ್ಷಿತ್ ರವರ ಪತಿಯ ತಂದೆ ಉಮಾ ಶಂಕರ್ ದೀಕ್ಷಿತ್ ಉತ್ತರ ಪ್ರದೇಶದಲ್ಲಿ ಪ್ರಮುಖ ರಾಜಕೀಯ ನಾಯಕರಾಗಿದ್ದರು. ರಾಜ್ಯದಲ್ಲಿ ಸದಸ್ಯರ ಬಲಾಬಲದಲ್ಲಿ 4ನೇ ಸ್ಥಾನದಲ್ಲಿರುವ ಕಾಂಗ್ರೆಸ್ ನ್ನು ಹೇಗಾದರೂ ಅಧಿಕಾರಕ್ಕೆ ತರಲು ಶತಾಯಗತಾಯ ಪ್ರಯತ್ನಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com