7ನೇ ವೇತನ ಆಯೋಗ ಶಿಫಾರಸ್ಸಿಗೆ ಒಪ್ಪಿಗೆ: ಕೇಂದ್ರ ಸರ್ಕಾರಿ ನೌಕರರ ವೇತನ ಶೇ.23.55 ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರ ಬಹುನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಬಹುನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ.

ಇದರಿಂದ ಕೇಂದ್ರ ಸರ್ಕಾರಿ ನೌಕರರ ವೇತನ ಹಾಗೂ ಪಿಂಚಣಿ ಕನಿಷ್ಠ ಶೇ.23.5ರಷ್ಟು ಹೆಚ್ಚಳವಾಗಲಿದೆ. 2016ರ ಜನವರಿ 1ರಿಂದ ಇದು ಅನ್ವಯವಾಗಲಿದೆ.

ಕೇಂದ್ರ ನೌಕರರ 7ನೇ ವೇತನ ಆಯೋಗದ ಶಿಫಾರಸ್ಸುಗಳ ಪ್ರಕ್ರಿಯೆಗೆ ವೇತನ ಹೆಚ್ಚಳ ಸಂಪುಟ ಕಾರ್ಯದರ್ಶಿ ಪಿ.ಕೆ. ಸಿನ್ಹಾ ಅವರ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಇದಕ್ಕೂ ಮುನ್ನ ಹಣಕಾಸು ಸಚಿವಾಲಯ ಶಿಫಾರಸ್ಸಿಗೆ ಅನುಮೋದನೆ ನೀಡಿತ್ತು. ಆದರೆ ಕೇಂದ್ರ ಸಂಪುಟ ಅಂಗೀಕರಿಸುವುದು ಮಾತ್ರ ಬಾಕಿ ಇತ್ತು. ಇದರಂತೆ ಇದೀಗ ಕೇಂದ್ರ ಸಂಪುಟ ಕೂಡ ವೇತನ ಆಯೋಗ ಶಿಫಾರಸ್ಸಿಗೆ ಅನುಮೋದನೆ ನೀಡಿರುವುದು, ಸರ್ಕಾರಿ ನೌಕರರಿಗೆ ಅಚ್ಛೇ ದಿನ್ ಬಂದಂತಾಗಿದೆ.

7ನೇ ವೇತನ ಆಯೋಗ ಜಾರಿಯಾದರೆ, ಸರ್ಕಾರದ ಬೊಕ್ಕಸಕ್ಕೆ 1.02 ಲಕ್ಷ ಕೋಟಿ ಹೆಚ್ಚುವರಿ ಹೊರೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಇದರಿಂದ 47 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು 58 ಪಿಂಚಣಿದಾರರಿಗೆ ಇದರಿಂದ ಪ್ರಯೋಜನವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com