ಅತ್ಯಾಚಾರ ಹೇಳಿಕೆಗೆ ಕ್ಷಮೆಯಾಚಿಸದ ಸಲ್ಮಾನ್ ಖಾನ್: ಮಹಿಳಾ ಆಯೋಗ

ಸುಲ್ತಾನ್ ಚಿತ್ರದ ಶೂಟಿಂಗ್ ನಂತರ ಮಹಿಳೆಯೊಬ್ಬಳು ಅತ್ಯಾಚಾರಕ್ಕೆ ಒಳಗಾದಂತಹ ಅನುಭವ ನನಗಾಗಿತ್ತು ಎಂಬ ವಿವಾದಾತ್ಮಕ ಹೇಳಿಕೆಗೆ ನಟ ಸಲ್ಮಾನ್...
ಸಲ್ಮಾನ್ ಖಾನ್
ಸಲ್ಮಾನ್ ಖಾನ್

ಮುಂಬೈ: ಸುಲ್ತಾನ್ ಚಿತ್ರದ ಶೂಟಿಂಗ್ ನಂತರ ಮಹಿಳೆಯೊಬ್ಬಳು ಅತ್ಯಾಚಾರಕ್ಕೆ ಒಳಗಾದಂತಹ ಅನುಭವ ನನಗಾಗಿತ್ತು ಎಂಬ ವಿವಾದಾತ್ಮಕ ಹೇಳಿಕೆಗೆ ನಟ ಸಲ್ಮಾನ್ ಖಾನ್ ಇನ್ನು ಬಹಿರಂಗವಾಗಿ ಕ್ಷಮೆಯಾಚಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಹಿರಂಗವಾಗಿ ಕ್ಷಮೆಯಾಚಿಸದ ಸಲ್ಮಾನ್ ಖಾನ್ ತಮ್ಮ ವಕೀಲರ ಮೂಲಕ ಆಯೋಗದ ನೋಟಿಸ್ ಗೆ ಉತ್ತರ ನೀಡಿದ್ದಾರೆ. ನೋಟಿಸ್ ಗೆ ಸಲ್ಲು ನೀಡಿರುವ ಉತ್ತರವನ್ನು ಪರಿಶೀಲಿಸಿ ಮುಂದೇನು ಕ್ರಮ ಕೈಗೊಳ್ಳಬೇಕು ಎಂಬ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಳಂ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಇಂದು ಮಹಿಳಾ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು ಆದರೆ ತಾವು ಹಾಜರಾಗದೇ ವಕೀಲರ ಮೂಲಕ ನೋಟಿಸ್ ಗೆ ಉತ್ತರ ನೀಡಿದ್ದಾರೆ ಎಂದು ಕುಮಾರಮಂಗಳಂ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com