ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೌರಶಕ್ತಿ ಮೂಲಕ ವಿದ್ಯುತ್ ಪೂರೈಕೆ

ಶುದ್ಧ ಇಂಧನ ಮತ್ತು ಪರಿಣಾಮಕಾರಿ ಆರೋಗ್ಯ ನಡುವೆ ಸಂಪರ್ಕ ಕಲ್ಪಿಸಿರುವ ಕೇಂದ್ರ ಸರ್ಕಾರ ದೇಶಾದ್ಯಂತ ಪ್ರಾಥಮಿಕ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಶುದ್ಧ ಇಂಧನ ಮತ್ತು ಪರಿಣಾಮಕಾರಿ ಆರೋಗ್ಯ ನಡುವೆ ಸಂಪರ್ಕ ಕಲ್ಪಿಸಿರುವ ಕೇಂದ್ರ ಸರ್ಕಾರ ದೇಶಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿದ್ಯುತ್ ಪೂರೈಕೆಗೆ ಸೌರಶಕ್ತಿಯಿಂದ ವಿದ್ಯುತ್ ಉತ್ಪಾದಿಸಲು ನಿರ್ಧರಿಸಿದೆ.

ಇಂಧನ, ಪರಿಸರ ಮತ್ತು ಜಲ ಮಂಡಳಿಯ ಸಹಯೋಗದೊಂದಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಹೊಸ ಅಭಿಯಾನವನ್ನು ಪ್ರಾರಂಭಿಸಿದೆ.
ಗ್ರಾಮೀಣ, ಪಟ್ಟಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರಂತರ ವಿದ್ಯುತ್ ಪೂರೈಕೆಯ ಸಮಸ್ಯೆಯಿದೆ. ಇಂತಹ ಸಂದರ್ಭದಲ್ಲಿ ನಿರಂತರ ಅಗ್ಗದ ದರದಲ್ಲಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲು ಸೌರ ಶಕ್ತಿಯನ್ನು ಬಳಸಿಕೊಳ್ಳಲಾಗುವುದು.

2015ರಲ್ಲಿ ಸಿಕ್ಕಿರುವ ಮಾಹಿತಿಯಂತೆ ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 35 ದಶಲಕ್ಷ ಮಂದಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸೇವೆಗಳಿಗೆ ವಿದ್ಯುತ್ ಇಲ್ಲದೆ ಸೇವೆ ಪಡೆಯುವುದರಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com