

ಡೆಹ್ರಾಡೂನ್: ದೇವನಾಡು ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಈ ವರೆಗೂ 8 ಮಂದಿ ಸಾವನ್ನಪ್ಪಿ ಸುಮಾರು 25ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರಾಖಂಡದ ಛಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಪವಿತ್ರ ಗಂಗಾನದಿ ಉಕ್ಕಿ ಹರಿಯುತ್ತಿದೆ.