

ಬಲಂಗೀರ್: ಸುಮಾರು 25 ವರ್ಷದ ಯುವಕನೊಬ್ಬ ಮೂರು ಅಂತಸ್ತಿನ ಮಹಡಿ ಮೇಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ಬಲಂಗೀರ್ ಜಿಲ್ಲೆಯ ಟಿಟ್ಲಾಘಡ್ ಪ್ರಾಂತ್ಯದಲ್ಲಿ ನಡೆದಿದೆ.
ಸುಮಾರು 45 ನಿಷಗಳ ಕಾಲ ಕಟ್ಟಡವನ್ನು ಹತ್ತಿದ ಯುವಕ ಆತ್ನಹತ್ಯೆಗೆ ಪ್ರಯತ್ನಿಸುತ್ತಿರುವುದನ್ನು ಗಮನಿಸಿದಿ ಸ್ಥಳೀಯರು ಕೂಡಲೇ ಪೊಲೀಸರಿಗೆ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ತಿಳಿಸಿದ್ದರು. ಆದರೆ ಪೊಲೀಸರು ಕಟ್ಟಡದ ಸಮೀಪಕ್ಕೆ ಆಗಮಿಸುತ್ತಿದ್ದಂತೆಯೇ ಯುವಕ ಕೆಳಕ್ಕೆ ಹಾರಿದ್ದಾನೆ. ಕಳೆಕ್ಕೆ ಬಿದ್ದ ಯುವಕನ ತಲೆಗೆ ಗಂಭೀರ ಪೆಟ್ಟಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ತಲೆಯಿಂದ ತೀವ್ರ ರಕ್ತಸ್ರಾವವಾದ ಪರಿಣಾಮ ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಟಿಟ್ಲಾಘಡ್ ಪೊಲೀಸರು ತನಿಖೆ ನಡೆಸುತ್ತಿದ್ದು, ಆತ್ಮಹತ್ಯೆಗೆ ಏನು ಕಾರಣ ಎಂಬುದರ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಯುವಕ ಮಹಡಿಯಿಂದ ಜಿಗಿದ ದೃಶ್ಯಾವಳಿಯನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ