ಇಟಾ(ಉತ್ತರಪ್ರದೇಶ): 15 ವರ್ಷದ ಶಾಲಾ ವಿದ್ಯಾರ್ಥಿನಿಯ ಅತ್ಯಾಚಾರ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಶಾಲಿಯ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ವರ್ಷ ತನ್ನ ಶಾಲೆಯ ವಿದ್ಯಾರ್ಥಿನಿಯ ಮೇಲೆ ಶಾಲಾ ವ್ಯವಸ್ಥಾಪಕ ಜೀತೇಂದ್ರ ಕುಮಾರ್ ಎಂಬಾತ ಅತ್ಯಾಚಾರ ನಡೆಸಿ ಅದನ್ನು ವಿಡಿಯೋ ಮಾಡಿಕೊಂಡಿದ್ದ. ಇದರಿಂದ ಹೆದರಿಯ ಹುಡುಗಿ ಈ ವಿಷಯವನ್ನು ಯಾರಲ್ಲೂ ಹೇಳಿರಲಿಲ್ಲ.
ಇದನ್ನು ಬಳಸಿಕೊಂಡ ಜೀತೇಂದ್ರ ಕುಮಾರ್ ಮುಂದೆ ಹುಡುಗಿಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಆದರೆ ಇದಕ್ಕಿದ್ದಂತೆ ಈ ವಿಡಿಯೋ ವೈರಲ್ ಆಗಿದ್ದು. ಇದಾಗ ಬಳಿಕ ಹುಡುಗಿ ಮನೆಯವರಿಗೆ ವಿಷಯ ಮುಟ್ಟಿಸಿದ್ದಾಳೆ.
ಮಗಳ ಮೇಲಿನ ಅತ್ಯಾಚಾರ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಕೋತ್ವಾಲಿ ಬಗ್ವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈರಲ್ ಆಗಿದ್ದ ವಿಡಿಯೋ ಆಧರಿಸಿ ಪೊಲೀಸರು ಜೀತೇಂದ್ರನನ್ನು ಬಂಧಿಸಿದ್ದಾರೆ.