ದೇಶ

ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಗೆ ಷರತ್ತುಬದ್ಧ ಜಾಮೀನು

ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಗೆ ಷರತ್ತುಬದ್ಧ ಜಾಮೀನು
ಕನ್ಹಯ್ಯ ಕುಮಾರ್
Published On :

ನವದೆಹಲಿ: ದೇಶದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ.

ಕನ್ಹಯ್ಯ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಪ್ರತಿಭಾ ರಾಣಿ ಅವರು, ಕನ್ಹಯ್ಯ ಕುಮಾರ್ ಗೆ 6 ತಿಂಗಳ ಕಾಲ ಮಧ್ಯಂತರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಅಲ್ಲದೆ ಪೊಲೀಸರ ತನಿಖೆಗೆ ಸಹಕರಿಸುವಂತೆ ಆರೋಪಿಗೆ ಸೂಚಿಸಿದ್ದಾರೆ.
ಸಂಸತ್ತು ದಾಳಿ ರೂವಾರಿ ಅಫ್ಜಲ್ ಗುರುವಿಗೆ ಮರಣದಂಡನೆ ನೀಡಿ ಮೂರು ವರ್ಷವಾದ ಹಿನ್ನೆಲೆಯಲ್ಲಿ ಫೆಬ್ರವರಿ 9ರಂದು ಜವಹರಲಾಲ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಕನ್ಹಯ್ಯ ಕುಮಾರ್ ಅವರನ್ನು ದೆಹಲಿ ಪೊಲೀಸರು ಫೆಬ್ರವರಿ 12ರಂದು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.