ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ

'ರಾಜೀವ್ ಪುತ್ರನಾಗಿ ನಾನು ನನ್ನ ಅಭಿಪ್ರಾಯ ಕೊಡುವುದಿಲ್ಲ, ಸರ್ಕಾರವೇ ನಿರ್ಧರಿಸಲಿ': ರಾಹುಲ್

ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಏಳು ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡುವ...

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಏಳು ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಬಿಟ್ಟದ್ದು ಎಂದು ಅವರ ಪುತ್ರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ರಾಜೀವ್ ಗಾಂಧಿಯವರ ಮಗನಾಗಿ ನಾನು ಈ ಬಗ್ಗೆ ಅಭಿಪ್ರಾಯ ನೀಡುವುದಿಲ್ಲ ಎಂದು ಕೂಡ ತಿಳಿಸಿದ್ದಾರೆ.

'' ಇದು ಸರ್ಕಾರದ ನಿರ್ಧಾರಕ್ಕೆ ಬಿಟ್ಟ ವಿಷಯ. ನಾನು ನನ್ನ ವೈಯಕ್ತಿಕ ಅಭಿಪ್ರಾಯವನ್ನು ನೀಡುವುದಿಲ್ಲ ಎಂದು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಹತ್ಯೆಯ ಎಲ್ಲಾ ಏಳು ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಗೃಹ ಇಲಾಖೆಯ ಅಭಿಪ್ರಾಯ ಕೇಳಿ ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ಗ್ನಾನದೇಸಿಕನ್ ಪತ್ರ ಬರೆದಿದ್ದಾರೆ.

ತಮಿಳುನಾಡು ಸರ್ಕಾರ ಈಗಾಗಲೇ ಎಲ್ಲಾ ಏಳು ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಅಪರಾಧಿಗಳು ಈಗಾಗಲೇ 24 ವರ್ಷಗಳನ್ನು ಜೈಲಿನಲ್ಲಿ ಕಳೆದಿರುವುದರಿಂದ ಅಪರಾಧ ದಂಡಸಂಹಿತೆ ಕಾಯ್ದೆ ಸೆಕ್ಷನ್ 435ರ ಅಡಿ ತಮಿಳುನಾಡು ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಮುನ್ನ ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳುವುದು ಮುಖ್ಯವಾಗುತ್ತದೆ.

Related Stories

No stories found.

Advertisement

X
Kannada Prabha
www.kannadaprabha.com