

ಸುಕ್ಮಾ(ಛತ್ತೀಸ್ ಗಢ): ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್ ) ಸಿಬ್ಬಂದಿ ಮೃತಪಟ್ಟಿದ್ದು, 14 ಮಂದಿಗೆ ಗಾಯಗಳಾಗಿವೆ.
ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಕಳೆದ ರಾತ್ರಿ 12.30 ಸುಮಾರಿಗೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಕಾಳಗ ನಡೆದಿದೆ.
ಮಾವೋವಾದಿಗಳಿಗಾಗಿ ಭದ್ರತಾ ಸಿಬ್ಬಂದಿ, ಸಿಆರ್ಪಿಎಫ್ ಹಾಗೂ ರಾಜ್ಯ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಿದ್ದಾರೆ.