ಸ್ವಾತಂತ್ರ್ಯ ಸಿಕ್ಕಿರುವುದು ಗಡಿಕಾಯುವ ಯೋಧರಿಂದ: ಕನ್ಹಯ್ಯಗೆ ಹೈ ಪಾಠ
ನವದೆಹಲಿ; ಜೆಎನ್ ಯು ವಿದ್ಯಾರ್ಥಿಗಳಿಗೆ ದೇಶ ವಿರೋಧಿ ಘೋಷಣೆಗಳನ್ನು ಕೂಗುವ ಸ್ವಾತಂತ್ರ್ಯ ಸಿಕ್ಕಿರುವುದು ದೇಶದ ಗಡಿಕಾಯುವ ಯೋಧರಿಂದ ಎಂಬುದನ್ನು ಮರೆಯಬೇಡಿ ಎಂದು ಹೇಳಿ ದೆಹಲಿ ಹೈಕೋರ್ಟ್ ಕನ್ಹಯ್ಯಗೆ ಪಾಠ ಮಾಡಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬರುತ್ತಿದೆ.
ಕನ್ಹಯ್ಯಾ ಜಾಮೀನು ಅರ್ಜಿ ಕುರಿತಂತೆ ವಿಚಾರಣೆ ನಡೆಸುವ ವೇಳೆ ಕನ್ಹಯ್ಯನನ್ನು ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಾಲಯವು, ಉಗ್ರರ ಅಫ್ಜಲ್ ಗುರು ಪರ ಕಾರ್ಯಕ್ರಮ ಆಯೋಜನೆ ಮಾಡುವುದು ಹಾಗೂ ಆತನ ಪರ ಘೋಷಣೆಗಳನ್ನು ಕೂಗುವುದನ್ನು ವಾಕ್ ಸ್ವಾತಂತ್ರ್ಯದ ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ.
ಇಂದು ವಿಶ್ವದಲ್ಲಿಯೇ ಅತಿ ಕಠಿಣ ಸೇವಾ ಪ್ರದೇಶಗಳೆಂದು ಕರೆಯಲಾಗುವ ಸಿಯಾಚಿನ್ ಹಾಗೂ ರಣ್ ಆಫ್ ಕಛ್ ನಲ್ಲಿ ನಮ್ಮ ದೇಶದ ಯೋಧರು ಹುತಾತ್ಮರಾಗುತ್ತಿದ್ದಾರೆ. ಆದರೆ ಇದರ ಪರಿವೇ ಇಲ್ಲದ ಜೆಎನ್ ಯು ವಿದ್ಯಾರ್ಥಿಗಳು ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ದೇಶವಿರೋಧಿ ಘೋಷಣೆ ಕೂಗುವ ಮೂಲಕ ಬಲಿದಾನ ನೀಡುವ ನಮ್ಮ ಯೋಧರಿಗೆ ಅವಮಾನ ಮಾಡುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿತ್ತು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ