
ಹೈದರಾಬಾದ್: ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಆಂಧ್ರಪ್ರದೇಶ ಸಮಾಜ ಕಲ್ಯಾಣ ಇಲಾಖೆ ಸಚಿವ ಕಿಶೋರ್ ಬಾಬು ಅವರ ಪುತ್ರ ರಾವೇಲ ಸುಶೀಲ ಅವರು ಭಾನುವಾರ ಪೊಲೀಸರಿಗೆ ಶರಣಾಗಿರುವುದಾಗಿ ತಿಳಿದುಬಂದಿದೆ.
ಕುಡಿದ ಅಮಲಿನಲ್ಲಿದ್ದ ಸಚಿವರ ಪುತ್ರ ಹಾಗೂ ಕಾರು ಚಾಲಕ ಗುರುವಾರ ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಿರುಕುಳ ನೀಡಿದ್ದರು. ಅಲ್ಲದೆ, ಕಾರಿನೊಳಗೆ ಎಳೆಯಲು ಯತ್ನಿಸಿದ್ದರು. ಈ ವೇಳೆ ಸ್ಥಳೀಯರು ರಕ್ಷಣೆ ಮಾಡಿದ್ದರು ಎಂದು ಹೇಳಿ ಮಹಿಳೆ ಬಂಜಾರ ಹಿಲ್ಸ್ ನಲ್ಲಿ ಸಚಿವರ ಪುತ್ರನ ವಿರುದ್ಧ ದೂರು ದಾಖಲಿಸಿದ್ದರು. ಇದರಂತೆ ಯುವತಿ ನೀಡಿದ ಮಾಹಿತಿ ಆಧಾರದ ಮೇಲೆ ಬಂಜಾರ ಹಿಲ್ಸ್ ಪೊಲೀಸರು ರವೇಲ ಸುಶೀಲ್ ವಿರುದ್ಧ ನಿರ್ಭಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.
ಇದರಂತೆ ಇಂದು ತವಾಗಿಯೇ ಬಂಜಾರ ಹಿಲ್ಸ್ ಪೊಲೀಸ್ ಠಾಣೆಗೆ ಬಂದಿರುವ ಸುಶೀಲ್ ಪೊಲೀಸರಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಪ್ರಸ್ತತು ಸುಶೀಲ್ ರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Advertisement