ಮುಂದುವರೆದ ಕುಲ್ಗಾಮ್ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬುಚ್ರು ಜಿಲ್ಲೆಯ ಕುಲ್ಗಾಮ್ ನಲ್ಲಿ ನಡೆಯುತ್ತಿರುವ ಉಗ್ರರ ವಿರುದ್ಧ ಎನ್ ಕೌಂಟರ್ ಕಾರ್ಯಾಚರಣೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ...
ಕುಲ್ಗಾಮ್ ನಲ್ಲಿ ಎನ್ ಕೌಂಟರ್ (ಸಂಗ್ರಹ ಚಿತ್ರ)
ಕುಲ್ಗಾಮ್ ನಲ್ಲಿ ಎನ್ ಕೌಂಟರ್ (ಸಂಗ್ರಹ ಚಿತ್ರ)
Updated on: 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುಚ್ರು ಜಿಲ್ಲೆಯ ಕುಲ್ಗಾಮ್ ನಲ್ಲಿ ನಡೆಯುತ್ತಿರುವ ಉಗ್ರರ ವಿರುದ್ಧ ಎನ್ ಕೌಂಟರ್ ಕಾರ್ಯಾಚರಣೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ  ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಕುಲ್ಗಾಮ್ ಗ್ರಾಮಕ್ಕೆ ಉಗ್ರರು ನುಸುಳಿರುವ ಕುರಿತು ಮಾಹಿತಿ ಪಡೆದ ಭಾರತೀಯ ಸೈನಿಕರು ಕಳೆದ ಶನಿವಾರ ಕಾರ್ಯಾಚರಣೆ ಕೈಗೊಂಡಿದ್ದರು. ಗ್ರಾಮಸ್ಥರ ನಡುವೆ ಅವಿತಿರುವ ಉಗ್ರರು  ಭಾರತೀಯ ಸೈನಿಕರ ಮೇಲೆ ಗುಂಡಿನ ಸುರಿಮಳೆ ಗೈಯುತ್ತಿದ್ದಾರೆ. ಇತ್ತ ಭಾರತೀಯ ಸೈನಿಕರು ಕೂಡ ಪ್ರತಿ ದಾಳಿ ನಡೆಸಿದ್ದು, ನಿನ್ನೆ ತಡರಾತ್ರಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು  ತಿಳಿದುಬಂದಿದೆ.

ಇನ್ನು ಕಾರ್ಯಾಚರಣೆಯಲ್ಲಿ ಓರ್ವ ಸೇನಾಧಿಕಾರಿಗೂ ಗಂಭೀರ ಗಾಯವಾಗಿದ್ದು, ಗಾಯಾಳು ಅಧಿಕಾರಿಗೆ ಸೇನಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com