'ರಾಜಕೀಯ ನಾಯಕ'ನನ್ನು ಫಿಕ್ಸ್ ಮಾಡಲು ರಾಷ್ಟ್ರೀಯ ಭದ್ರತೆಯೊಂದಿಗೆ ಕಾಂಗ್ರೆಸ್ ರಾಜಿ: ಜೇಟ್ಲಿ

ವಿವಾದಾತ್ಮಕ ಇಶ್ರತ್ ಜಾಹನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಹಣಕಾಸು...
ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)
ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)
ನವದೆಹಲಿ: ವಿವಾದಾತ್ಮಕ ಇಶ್ರತ್ ಜಾಹನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಕಾಂಗ್ರೆಸ್ ಒಬ್ಬ ರಾಜಕೀಯ ನಾಯಕನನ್ನು(ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ) ಫಿಕ್ಸ್ ಮಾಡುವ ಉದ್ದೇಶ ಹೊಂದಿತ್ತು ಎಂದು ಮಂಗಳವಾರ ಆರೋಪಿಸಿದ್ದಾರೆ.
ರಾಜ್ಯಸಭೆಯಲ್ಲಿ ಇಶ್ರತ್ ಜಾಹನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅರುಣ್ ಜೇಟ್ಲಿ, ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ರಾಷ್ಟ್ರೀಯ ಭದ್ರತೆಯೊಂದಿಗೆ ರಾಜಿ ಮಾಡಿಕೊಂಡಿತ್ತು ಎಂದು ಆರೋಪಿಸಿದರು.
'ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸರ್ಕಾರ ಬರೀ ಅಫಿಡವಿಟ್ ಮಾತ್ರ ಬದಲಾಯಿಸಿರಲಿಲ್ಲ. ಆರೋಪಿಗಳ 90 ದಿನಗಳ ಚಾರ್ಜ್ ಶೀಟ್ ಅನ್ನು ಸಲ್ಲಿಸಿರಲಿಲ್ಲ' ಎಂದು ಜೇಟ್ಲಿ ಆರೋಪಿಸಿದ್ದಾರೆ. ಅಲ್ಲದೆ ರಾಜಕೀಯ ವಿರೋಧಿಗಳನ್ನು ಫಿಕ್ಸ್ ಮಾಡುವ ಉದ್ದೇಶದಿಂದ ಇದೆಲ್ಲಾ ಮಾಡಿದ್ದರು ಎಂದರು.
ಇದೇ ವೇಳೆ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ದೇಶ ವಿರೋಧಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೇಟ್ಲಿ, ಬಂಧನಕ್ಕೊಳಗಾದ ವಿದ್ಯಾರ್ಥಿಗಳು ಸೇರಿದಂತೆ ಯಾವುದೇ ಒಬ್ಬ ನಿರ್ದಿಷ್ಟ ವಿದ್ಯಾರ್ಥಿಯನ್ನು ಟಾರ್ಗೆಟ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com