ಉಗ್ರರ ಬಗ್ಗೆ ಪಾಕ್ ಮಾಹಿತಿ: ಆಂತರಿಕ ಭದ್ರತೆ ಪರಿಶೀಲನೆಗೆ ಸಿಂಗ್ ಸಭೆ

ಪಾಕಿಸ್ತಾನದಿಂದ 10 ಉಗ್ರರು ಭಾರತದೊಳಗೆ ನುಸುಳಿರುವುದಾಗಿ ಪಾಕಿಸ್ತಾನ್ ಅಧಿಕಾರಿಗಳು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆದಿರುವುದಾಗಿ ತಿಳಿದುಬಂದಿದೆ...
ಗೃಹಸಚಿವ ರಾಜನಾಥ ಸಿಂಗ್ (ಸಂಗ್ರಹ ಚಿತ್ರ)
ಗೃಹಸಚಿವ ರಾಜನಾಥ ಸಿಂಗ್ (ಸಂಗ್ರಹ ಚಿತ್ರ)

ನವದೆಹಲಿ: ಪಾಕಿಸ್ತಾನದಿಂದ 10 ಉಗ್ರರು ಭಾರತದೊಳಗೆ ನುಸುಳಿರುವುದಾಗಿ ಪಾಕಿಸ್ತಾನ್ ಅಧಿಕಾರಿಗಳು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆದಿರುವುದಾಗಿ ತಿಳಿದುಬಂದಿದೆ.

ಪಾಕಿಸ್ತಾನ ಅಧಿಕಾರಿಗಳು ನೀಡಿರುವ ಮಾಹಿತಿ ಹಿನ್ನೆಲೆಯಲ್ಲಿ ಆಂತರಿಕ ಭದ್ರತೆ ಪರಿಶೀಲನೆಗಾಗಿ ಸಭೆ ನಡೆಸಿರುವ ರಾಜನಾಥ್ ಸಿಂಗ್ ಅವರು, ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಂಡಿರುವುದಾಗಿ ತಿಳಿದುಬಂದಿದೆ.

ಸಭೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಿರುವ ಭಾರತ-ಪಾಕಿಸ್ತಾನ ನಡುವಿನ ಟಿ-20 ವಿಶ್ವಕಪ್ ಪಂದ್ಯಾವಳಿ ಕುರಿತಂತೆ ಅಧಿಕಾರಿಗಳು ಚರ್ಚೆ ನಡೆಸಿದ್ದು, ಪಂದ್ಯಾವಳಿ ವೇಳೆ ಕ್ರಿಕೆಟ್ ಅಭಿಮಾನಿಗಳ ನೆಪದಲ್ಲಿ ಉಗ್ರರು ನುಸುಳುವ ಶಂಕೆಯಿರುವ ಹಿನ್ನೆಲೆಯಲ್ಲಿ ಮೈದಾನಕ್ಕೆ ಆಗಮಿಸುವ ಪಾಕ್ ಕ್ರಿಕೆಟ್ ಅಭಿಮಾನಿಗಳ ಮೇಲೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com