ಅಸ್ಸಾಂನಲ್ಲಿ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ನಟಿ ರಮ್ಯಾ

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ನಂತರ ನಾಪತ್ತೆಯಾಗಿದ್ದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅಸ್ಸಾಂನಲ್ಲಿ ಕಾಣಿಸಿಕೊಂಡಿದ್ದಾರೆ...
ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ನಟಿ ರಮ್ಯಾ
ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ನಟಿ ರಮ್ಯಾ

ಅಸ್ಸಾಂ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ನಂತರ ನಾಪತ್ತೆಯಾಗಿದ್ದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅಸ್ಸಾಂನಲ್ಲಿ ಕಾಣಿಸಿಕೊಂಡಿದ್ದಾರೆ.

ಅಸ್ಸಾಂ ವಿಧಾನಸಭೆ ಚುನಾವಣೆಗಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ರಮ್ಯಾ ಪಾಲ್ಗೊಂಡಿದ್ದಾರೆ. ಚುನಾವಣೆಯ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕನಿಗೆ ರಮ್ಯಾ ಸಾಥ್ ನೀಡಿದ್ದಾರೆ..

ಅಸ್ಸಾಂ ಪಾದಯಾತ್ರೆ ಬಗ್ಗೆ ರಮ್ಯಾ ಟ್ವಿಟರ್ ನಲ್ಲಿ ಫೋಟೊ ಅಪ್ ಲೋಡ್ ಮಾಡಿದ್ದಾರೆ. ಮೊದಲಿಗೆ ಕಾಂಗ್ರೆಸ್ ತಂಡ ಅಸ್ಸಾಂಗೆ ಎಂಟ್ರಿ ಕೊಟ್ಟ ಕೂಡಲೇ ಅಲ್ಲಿನ ಸ್ಥಳೀಯ ನಿವಾಸಿಗಳ ನೃತ್ಯದ ಫೋಟೊ ಟ್ವೀಟ್ ಮಾಡಿದ ರಮ್ಯಾ ನಂತರ ರಾಹುಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ತಾವು ಇರುವ ಚಿತ್ರವನ್ನೂ ಸಾಮಾಜಿಕ ಜಾಲತಾಣಕ್ಕೆ ಅಪ್‌ಲೊಡ್ ಮಾಡಿದ್ದಾರೆ. ಜೊತೆಗೆ ಈ ಕಾಲುಗಳು ನಡೆಯುವುದಕ್ಕಾಗಿ ಸೃಷ್ಟಿಯಾಗಿವೆ ಎಂದು ಫೋಟೋ ಜೊತೆ ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com