ಆರ್‌ಎಸ್‌ಎಸ್ ರಿಕ್ಷಾ ಚಾಲಕನಿಗೆ ಸಿಪಿಎಂ ಬೆಂಬಲಿಗರಿಂದ ಹಲ್ಲೆ

ಶಾಲಾ ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ಕಾರ್ಯಕರ್ತನ ಮೇಲೆ ಸಿಪಿಎಂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಎವಿ ಬಿಜು
ಎವಿ ಬಿಜು
Updated on: 

ಕನ್ನೂರು: ಶಾಲಾ ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ಕಾರ್ಯಕರ್ತನ ಮೇಲೆ ಸಿಪಿಎಂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ತಲಸೆರಿಯ ಪನ್ನೂರ್ ಬಳಿಯ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಆಟೋ ರಿಕ್ಷಾವನ್ನು ಅಡ್ಡಗಟ್ಟಿದ ಸಿಪಿಎಂ ಬೆಂಬಲಿಗರು ಆರ್‌ಎಸ್‌ಎಸ್ ಕಾರ್ಯಕರ್ತ ಆಟೋರಿಕ್ಷಾ ಚಾಲಕ 29 ವರ್ಷದ ಎವಿ ಬಿಜುವನ್ನು ಆರೇಳು ಮಂದಿ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಬಿಜುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಕೋಳಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com