
ನವದೆಹಲಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ(ಏಮ್ಸ್) ಆವರಣದಲ್ಲಿ ಕಟ್ಟಡದ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಏಮ್ಸ್ ನ ಶವಗಾರದ ಬಳಿ ಐವರು ಕಾರ್ಮಿಕರು ಕಟ್ಟಡ ನಿರ್ಮಾಣದ ಕಾರ್ಯದಲ್ಲಿ ತೊಡಗಿದ್ದಾಗ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಅಗ್ನಿ ಶಾಮಕ ಸಿಬ್ಬಂದಿಗೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.
ರಕ್ಷಣಾ ಕಾರ್ಯಾಚರಣೆ ವೇಳೆ ಐವರನ್ನು ಹೊರತೆಗೆಯಲಾಗಿದೆ. ಅವರಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಮೂವರ ಸ್ಥಿತಿ ಗಂಭೀರವಾಗಿದೆ.
Advertisement