ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿರುವ ಆಫ್ ಲಿವಿಂಗ್‌

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಗೆ ದಂಡ ವಿಧಿಸಿರುವುದಕ್ಕೆ ಆರ್ಟ್ ಆಫ್ ಲಿವಿಂಗ್ ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿರುವ ಆಫ್ ಲಿವಿಂಗ್‌

ನವದೆಹಲಿ: ಪರಿಸರ ಹಾಳು ಮಾಡಿದಕ್ಕಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿ ಟಿ) ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಗೆ ಐದು ಕೋಟಿ ರುಪಾಯಿ ದಂಡ ವಿಧಿಸಿರುವುದಕ್ಕೆ ಆರ್ಟ್ ಆಫ್ ಲಿವಿಂಗ್ ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಈ ಕುರಿತು ಮಾತನಾಡಿರುವ ಅವರು, ನ್ಯಾಯಮಂಡಳಿ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ಪತ್ರಕರ್ತರಿಗೆ ತಿಳಿಸಿದ್ದಾರೆ. ವಿಶ್ವ ಸಾಂಸ್ಕೃತಿಕ ಉತ್ಸವದಿಂದ ಪರಿಸರ ನಾಶವಾಗುತ್ತದೆ  ಆರೋಪಿಸಿ ಪರಿಸರ ವಾದಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಕರಣ, ಆರ್ಟ್ ಆಫ್ ಲಿವಿಂಗ್ ಗೆ 5 ಕೋಟಿ ರೂ ದಂಡ ವಿಧಿಸಿ ಉತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಿತ್ತು. 
ಮಾ.11ರಿಂದ 13ರ ವರೆಗೆ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆ ಯಮುನಾ ದಂಡೆಯ ಮೇಲೆ ಬೃಹತ್‌ ವೇದಿಕೆ ಸಿದ್ಧಪಡಿಸಿದ್ದು, ಟೆಂಟ್‌ ಮತ್ತು ರಸ್ತೆಗಳನ್ನು ನಿರ್ಮಾಣ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com