ಅಪ್ರಾಪ್ತೆಯನ್ನು ರೇಪ್ ಮಾಡಿ ಬೆಂಕಿ ಹಚ್ಚಿದ ಯುವಕ

ಯುವಕನೊಬ್ಬ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರವೆಸಗಿ, ಆಕೆಗೆ ಬೆಂಕಿ ಹಚ್ಚಿರುವ ಘಟನೆ ಗ್ರೇಟರ್ ನೊಯ್ಡಾದ ಟಿಗ್ರಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಯುವಕನೊಬ್ಬ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರವೆಸಗಿ, ಆಕೆಗೆ ಬೆಂಕಿ ಹಚ್ಚಿರುವ ಘಟನೆ ಗ್ರೇಟರ್ ನೊಯ್ಡಾದ ಟಿಗ್ರಿ ಎಂಬ ಹಳ್ಳಿಯಲ್ಲಿ ನಡೆದಿದೆ. 
ಟಿಗ್ರಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, 18 ವರ್ಷದ ಯುವಕ ಈ ಕೃತ್ಯವೆಸಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. 
ಬಾಲಕಿಯ ಪಕ್ಕದ ಮನೆಯವನಾಗಿದ್ದ ಈ ಯುವಕ, ಮನೆಯಲ್ಲಿ ಯಾರು ಇಲ್ಲದ ವೇಳೆಯನ್ನು ಗಮನಿಸಿ ಬಾಲಕಿಯ ಮನೆಗೆ ತೆರಳಿ ಆಕೆಯ ಮೇಲೆ ಅತ್ಯಾಚಾರವಸಗಿದಲ್ಲದೇ, ಆಕೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದನು. ಶೇ.95ರಷ್ಟು ಸುಟ್ಟುಗಾಯಗಳಿಂದ ನರಳುತ್ತಿದ್ದ ಅಪ್ರಾಪ್ತ ಬಾಲಕಿಯು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com