ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಸೋನಿಯಾ ಗಾಂಧಿ ಒತ್ತಾಯ

ಸಂಸತ್ತಿನಲ್ಲಿ ಮತ್ತು ವಿಧಾನಸಭೆಗಳಲ್ಲಿ ಮಹಿಳಾ ರಾಜಕಾರಣಿಗಳಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆ ಆಗ್ರಹಕ್ಕೆ ಅಂತಾರಾಷ್ಟ್ರೀಯ...
ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಸಂಸದೆ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಸಂಸದೆ ಸೋನಿಯಾ ಗಾಂಧಿ

ನವದೆಹಲಿ: ಸಂಸತ್ತಿನಲ್ಲಿ ಮತ್ತು ವಿಧಾನಸಭೆಗಳಲ್ಲಿ ಮಹಿಳಾ ರಾಜಕಾರಣಿಗಳಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆ ಆಗ್ರಹಕ್ಕೆ ಅಂತಾರಾಷ್ಟ್ರೀಯ ಮಹಿಳಾ ದಿನ ವೇದಿಕೆಯಾಯಿತು. ಮಹಿಳಾ ಮೀಸಲಾತಿ ಮಸೂದೆಯಡಿ ವಿಧಾನಸಭೆ ಹಾಗೂ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನಿಗದಿಪಡಿಸಬೇಕೆಂದು ಒತ್ತಾಯಿಸಲಾಗುತ್ತಿದೆ.

ನಿನ್ನೆ ಲೋಕಸಭೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಈ ಕುರಿತು ಚರ್ಚೆಗೆ ಮಹಿಳಾ ಸಂಸದರನ್ನು ಸೆಳೆದರು. ಆಗ ಕಾಂಗ್ರೆಸ್ ಅಧ್ಯಕ್ಷೆಗಿಂತ ಹೆಚ್ಚಾಗಿ ಮಹಿಳಾ ಸಂಸದೆಯಾಗಿ ಮಾತಿಗಿಳಿದ ಸೋನಿಯಾ ಗಾಂಧಿ,'' ನಾವು ನಿಮ್ಮ ಸಹಕಾರವನ್ನು ಬಯಸುತ್ತೇವೆ. ಹಾಗಾದರೆ ಸರ್ಕಾರ ನಮ್ಮ ನ್ಯಾಯಸಮ್ಮತ ಬೇಡಿಕೆಯನ್ನು ಪರಿಗಣಿಸಬಹುದು. ಇದಕ್ಕೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು, ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಪಟ್ಟಂತೆ ಅಲ್ಲಾ ರಾಜಕೀಯ ನಾಯಕರಲ್ಲಿ ಒಮ್ಮತಕ್ಕೆ ಬರಲು ಸರ್ಕಾರ ಪ್ರಯತ್ನಿಸುತ್ತಿದೆ. ಇದರಲ್ಲಿ ಗೆಲುವು ಸಿಗಬಹುದೆಂಬ ಆಶಾವಾದ ನಮ್ಮಲ್ಲಿದೆ ಎಂದರು.

ಕಳೆದ ಹತ್ತು ವರ್ಷಗಳ ಯುಪಿಎ ಸರ್ಕಾರದ ಆಡಳಿತಾವಧಿಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲು ಪ್ರಯತ್ನ ನಡೆದಿತ್ತು. ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್, ಆರ್ ಜೆಡಿಯ ಲಾಲು ಪ್ರಸಾದ್ ಯಾದವ್, ಜೆಡಿಯುನ ಶರದ್ ಯಾದವ್ ಅವರ ವಿರೋಧದ ನಡುವೆಯೂ ರಾಜ್ಯ ಸಭೆಯಲ್ಲಿ ಅಂಗೀಕಾರವಾಗಿದ್ದರೂ ಕೂಡ ಲೋಕಸಭೆಯಲ್ಲಿ ಒಪ್ಪಿಗೆ ಸಿಕ್ಕಿರಲಿಲ್ಲ. ಜೆಡಿಎಸ್ ವರಿಷ್ಠ ದೇವೇಗೌಡ ಅವರು ಪ್ರಧಾನಿಯಾಗಿದ್ದಾಗ 1996ರಲ್ಲಿ ಪ್ರಥಮ ಬಾರಿಗೆ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದಾಗಲೂ ಇದೇ ಪರಿಸ್ಥಿತಿ ಉಂಟಾಗಿತ್ತು.

ಮಹಿಳಾ ಮೀಸಲಾತಿ ಮಸೂದೆಯನ್ನು ಸ್ಥಾಯಿ ಸಮಿತಿಯ ಮುಖ್ಯಸ್ಥೆಯಾಗಿದ್ದ ಸಿಪಿಐ ನಾಯಕಿ ದಿವಂಗತ ಗೀತಾ ಮುಖರ್ಜಿಯವರು ರಚಿಸಿದ್ದರು. ಇದನ್ನು ಪ್ರಸ್ತಾಪಿಸಿದ ಸೋನಿಯಾ ಗಾಂಧಿ, ಎನ್ ಡಿಎ ಸರ್ಕಾರ ನೀಡಿರುವ ಗರಿಷ್ಠ ಆಡಳಿತ ಭರವಸೆಯಡಿ ಮಸೂದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com