ಮಾಂಸಾಹಾರಿಗಳಿಗೆ ಹೋಲಿಸಿದರೇ ಸಸ್ಯಾಹಾರಿಗಳು ಆರೋಗ್ಯವಂತರು: ಜೆ.ಪಿ ನಡ್ಡಾ

ಮಾಂಸಾಹಾರಿಗಳಿಗೆ ಹೋಲಿಸಿದರೇ ಸಸ್ಯಾಹಾರಿಗಳು ಹೆಚ್ಚು ಆರೋಗ್ಯವಾಗಿರುತ್ತಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ,ಪಿ ನಡ್ಡಾ ಹೇಳಿದ್ದಾರೆ.
ಜೆ.ಪಿ ನಡ್ಡಾ
ಜೆ.ಪಿ ನಡ್ಡಾ

ನವದೆಹಲಿ: ಮಾಂಸಾಹಾರಿಗಳಿಗೆ ಹೋಲಿಸಿದರೇ ಸಸ್ಯಾಹಾರಿಗಳು ಹೆಚ್ಚು ಆರೋಗ್ಯವಾಗಿರುತ್ತಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ,ಪಿ ನಡ್ಡಾ ಹೇಳಿದ್ದಾರೆ.

ಇತ್ತೀಚೆಗೆ ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಮಾಂಸ ಸೇವನೆ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ವರದಿ ನೀಡಿತ್ತು.  ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಅವರು ಸಸ್ಸಾಹಾರ ಸೇವನೆ ಹೃದ್ರೋಗ, ಹೈಪರ್ ಟೆನ್ಷನ್, ಮಧುಮೇಹ, ಕ್ಯಾನ್ಸರ್ ಹಾಗೂ ಮೂತ್ರಪಿಂಡದ ಸಮಸ್ಯೆಯನ್ನು ತಡೆಯುತ್ತದೆ ಎಂದು ಅವರು ಹೇಳಿದ್ದಾರೆ.

ಸಸ್ಯಾಹಾರದಲ್ಲಿ ಕೊಬ್ಬಿನ ಅಂಶ, ಕೊಲೆಸ್ಟ್ರಾಲ್ ಹಾಗೂ ಪ್ರಾಣಿಜನ್ಯ ಅಂಶಗಳನ್ನು ಕಡಿಮೆ ಸೇವನೆ ಮಾಡತ್ತಾರೆ, ಕಾರ್ಬೋ ಹೈಡ್ರೇಟ್ ಜೀರ್ಣಕ್ಕೆ ಪೂರಕವಾದ ನಾರಿನ ಅಂಶ ಅಧಿಕ ಸೂಕ್ಷ್ಮ ಪೋಷಕಾಂಶಗಳನ್ನು ಹೆಚ್ಚಾಗಿ ಸೇವಿಸುತ್ತಾರೆ ಎಂದು  ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com