ಯೋಧರ ಕುರಿತು ಹೇಳಿಕೆ: ಕನ್ಹಯ್ಯ ವಿರುದ್ಧ ಪ್ರಕರಣ ದಾಖಲು

ಭಾರತೀಯ ಯೋಧರು ಕಾಶ್ಮೀರದಲ್ಲಿನ ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಾರೆಂದು ಹೇಳಿದ್ದ ಜೆಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ವಿರುದ್ಧ ಇದೀಗ...
ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್
ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್
Updated on: 
ನವದೆಹಲಿ; ಭಾರತೀಯ ಯೋಧರು ಕಾಶ್ಮೀರದಲ್ಲಿನ ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಾರೆಂದು ಹೇಳಿದ್ದ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ವಿರುದ್ಧ ಇದೀಗ ಪ್ರಕರಣವೊಂದು ಗುರುವಾರ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಭಾರತೀಯ ಜನತಾ ಯುವ ಮೋರ್ಚಾ ಕನ್ಹಯ್ಯ ಹಾಗೂ ಜೆಎನ್ ಯು ಪ್ರಧ್ಯಾಪಕ ನಿವೇದಿತ ಮೆನನ್ ವಿರುದ್ಧ ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದೆ ಎಂದು ಹೇಳಲಾಗುತ್ತಿದೆ.

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಜೆಎನ್‌ಯು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಕನ್ಹಯ್ಯ, ಭಾರತೀಯ ಸೈನಿಕರು ಜಮ್ಮ ಕಾಶ್ಮೀರದಲ್ಲಿ ಮಹಿಳೆಯರನ್ನು ಅತ್ಯಾಚಾರ ಮಾಡುತ್ತಾರೆ. ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕಾಶ್ಮೀರದಲ್ಲಿ ಚಾಲ್ತಿಯಲ್ಲಿರುವ ಸಶಸ್ತ್ರ ಪಡೆಗಳ ಕಾಯ್ದೆಯ ವಿರುದ್ಧ ತಾನು ಧ್ವನಿ ಎತ್ತಲಿದ್ದೇನೆ ಎಂದು ಹೇಳಿದ್ದರು.

ಇದಲ್ಲದೆ, ಜೆಎನ್ ಯು ಪ್ರಧ್ಯಾಪಕಿ ನಿವೇದಿತ ಮೆನನ್ ಅವರು ಕೂಡ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿ ಭಾರತೀಯ ಯೋಧರ ವಿರುದ್ಧ ಹೇಳಿಕೆಯನ್ನು ನೀಡಿದ್ದರು. ಅಲ್ಲದೆ, ಭಾರತ ಕಾಶ್ಮೀರವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೆಂದು ಹೇಳಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.

ಇದರಂತೆ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿದ್ದ ಮೆನನ್ ಅವರು, ನಾನು ದೇಶ ವಿರೋಧಿ ಹೇಳಿಕೆ ನೀಡಿದ್ದೇನೆ ಎಂಬುದನ್ನು ನಂಬುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com