ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಗ್ರಾಮೀಣ ಪ್ರದೇಶಕ್ಕೆ ಅಡುಗೆ ಅನಿಲ (ಎಲ್ಪಿಜಿ) ಸಂಪರ್ಕ ಕಲ್ಪಿಸುವ 8000 ಕೋಟಿ ರುಪಾಯಿ ಮೊತ್ತದ ಎಲ್ ಪಿಜಿ ಯೋಜನೆಗೆ ಒಪ್ಪಿಗೆ ನೀಡಿದೆ ಎಂದು ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.