

ನವದೆಹಲಿ: ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಯಾಗಿದ್ದ ಬಲ್ಬೀರ್ ಸಿಂಗ್ ಚೌಹಾಣ್ ಅವರನ್ನು ಕಾನೂನು ಆಯೋಗದ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದಲೂ ಖಾಲಿ ಇದ್ದ ಹುದ್ದೆಗೆ ಕೊನೆಗೂ ಸರ್ಕಾರ ಬಲ್ಬೀರ್ ಸಿಂಗ್ ಚೌಹಾಣ್ ಅವರನ್ನು ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿದ್ದು, ನೇಮಕ ಕುರಿತಂತೆ ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಅವರು ಟ್ವಿಟ್ ಮಾಡಿದ್ದಾರೆ.
2009ರಿಂದ 2014ರವರೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಕೆಲಸ ಮಾಡಿದ್ದ ಚೌಹಾಣ್ ಅವರು ಒಡಿಶಾ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿಯೂ 2008, 2009ರಲ್ಲಿ ಕೆಲಸ ಮಾಡಿದ್ದರು.