ಜಾರಿ ನಿರ್ದೇಶನಾಲಯದಿಂದ ವಿಜಯ್ ಮಲ್ಯಗೆ ಸಮನ್ಸ್

ಕಿಂಗ್‌ಫಿಷರ್‌ ಏರ್‌ಲೈನ್ಸ್‌ ಮಾಲೀಕ ವಿಜಯ್‌ ಮಲ್ಯ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್...
ವಿಜಯ್ ಮಲ್ಯ
ವಿಜಯ್ ಮಲ್ಯ
Updated on: 
ನವದೆಹಲಿ: ಕಿಂಗ್‌ಫಿಷರ್‌ ಏರ್‌ಲೈನ್ಸ್‌ ಮಾಲೀಕ ವಿಜಯ್‌ ಮಲ್ಯ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. 
ಅಕ್ರಮವಾಗಿ ರು.9,000 ಕೋಟಿ ಸಾಲ ಪಡೆದುಕೊಂಡಿರುವ ಆರೋಪದಡಿ ವಿಜಯ್ ಮಲ್ಯಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ಮಾರ್ಚ್ 18ರೊಳಗಾಗಿ ವಿಚಾರಣೆಗೆ ಹಾಜರಾಗಬೇಕು, ಇಲ್ಲವಾದರೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗುತ್ತದೆ ಎಂದು ಜಾರಿ ನಿರ್ದೇಶನಾಲಯ ಎಚ್ಚರಿಸಿದೆ. ಇಮೇಲ್ ಮುಖಾಂತರ ಸಮನ್ಸ್ ಕಳುಹಿಸಲಾಗಿದೆ. 
‘2015ರ ನವೆಂಬರ್‌ವರೆಗೆ ಮಲ್ಯ ಎಸ್‌ಬಿಐ ಸೇರಿದಂತೆ ವಿವಿಧ ಬ್ಯಾಂಕ್‌ಗಳಿಂದ ರು.9091 ಕೋಟಿ ಸಾಲ ಪಡೆದಿರುವ ಮಲ್ಯ ದೇಶ ಬಿಟ್ಟು ಹೋಗಿದ್ದಾರೆ.
ಐಡಿಬಿಐ ಬ್ಯಾಂಕ್ ನಿಂದ ವಿಜಯ್ ಮಲ್ಯ ಒಡೆತನದ ಕಿಂಗ್ ಫಿಷರ್ ಏರ್ ಲೈನ್ಸ್ ಗೆ 900 ಕೋಟಿ ಹಣ  ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ತನಿಖೆ ಆರಂಭಿಸಿತ್ತು. ಇದರಂತೆ ಬ್ಯಾಂಕ್ ನ 6 ಅಧಿಕಾರಿಗಳಿಗೆ ವಿಚಾರಣೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. 
ಈ ಹಿನ್ನಲೆಯಲ್ಲಿ ಮಾಜಿ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ ಓ) ರಘುನಾಥನ್ ಅವರು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯಕ್ಕೆ ಶುಕ್ರವಾರ ಹಾಜರಾಗಿದ್ದು, ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com