ವಿವಾದದ ನಡುವೆಯು ಜೆಎನ್ ಯುಗೆ ರಾಷ್ಟ್ರಪತಿಗಳ ಪ್ರಶಸ್ತಿ

ಅನೇಕ ವಿವಾದಗಳ ಸುಳಿಯಲ್ಲಿ ಸಿಲುಕಿರುವ ಜವಹಾರ್ ಲಾಲ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಅನೇಕ ವಿವಾದಗಳ ಸುಳಿಯಲ್ಲಿ ಸಿಲುಕಿರುವ ಜವಹಾರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ರಾಷ್ಟ್ರಪತಿಗಳ ಪ್ರಶಸ್ತಿಗೆ ಪಾತ್ರವಾಗಿದೆ.
ಸಂಶೋಧನೆ ಮತ್ತು ಪರಿವರ್ತನೆಗಾಗಿ ರಾಷ್ಟ್ರಪತಿಗಳ ಪ್ರಶಸ್ತಿಗೆ ಜೆಎನ್ ಯು ಪಾತ್ರವಾಗಿದೆ. ವಿಶ್ವವಿದ್ಯಾಲಯದ ಅಣ್ವಿಕ ಪರಾವಲಂಬಿ ಜೀವಿ ವಿಜ್ಞಾನ ವಿಭಾಗದ ಪ್ರೊ.ರಾಕೇಶ್ ಭಟ್ನಾಗರ್ ಅವರಿಗೆ ಈ ಪ್ರಶಸ್ತಿ ಲಭಿಸಿದೆ. 
ಮಾರ್ಚ್ 14ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಣಬ್ ಮುಖರ್ಜಿ ಅವರು ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 
ಅಸ್ಸಾಂನಲ್ಲಿರುವ ತೇಜ್ ಪುರ್ ವಿಶ್ವವಿದ್ಯಾಲಯವು ಸಂದರ್ಶಕರ ಪ್ರಶಸ್ತಿಗೆ ಪಾತ್ರವಾಗಿದೆ ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. 
ಈ ಪ್ರಶಸ್ತಿ ನೀಡಲು ಎಲ್ಲಾ ವಿಶ್ವವಿದ್ಯಾಲಯಗಳಿಂದ ಅರ್ಜಿ ಆಹ್ವಾನಿಸಿತ್ತು. ಎಲ್ಲಾ ವಿಭಾಗಗಳು ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿದ್ದವು. ಒಮಿಟಾ ಪೌಲ್ ಅವರನ್ನೊಳಗೊಂಡ ಆಯ್ಕೆ ಸಮಿತಿ ರಚಿಸಲಾಗಿತ್ತು. ಈ ಸಮಿತಿಯಲ್ಲಿ ರಾಷ್ಟ್ರಪತಿ ಕಾರ್ಯದರ್ಶಿ, ಉನ್ನತ ಮಟ್ಟದ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ವಿಜ್ಞಾನ ಮತ್ತು ತಾಂತ್ರಿಕ ವಿಭಾಗದ ಅಧ್ಯಕ್ಷ, ಸೈನ್ ಟಿವಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನ ನಿರ್ದೇಶಕರು ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com