ಹೈದ್ರಾಬಾದ್: ರಾಜಕೀಯ ಪಕ್ಷಗಳು ತಮ್ಮ ಆದಾಯದ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅತೀ ಹೆಚ್ಚು ಆದಾಯ ಕಾಂಗ್ರೆಸ್ ಪಕ್ಷಕ್ಕಿದೆ. 2010-11 ರಿಂದ 2013-14ರ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಒಟ್ಟು ಆದಾಯ ರು. 1,687. 12 ಕೋಟಿ ಆಗಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯಲ್ಲಿ ಉಲ್ಲೇಖಿಸಲಾಗಿದೆ.