ಗೃಹ ಸಚಿವ ರಾಜನಾಥ್ ಸಿಂಗ್- ಕಾಶ್ಮೀರ ರಾಜ್ಯಪಾಲ ಎನ್ ಎನ್ ವೋಹ್ರಾ ಭೇಟಿ

ಜಮ್ಮು-ಕಾಶ್ಮೀರ ರಾಜ್ಯಪಾಲ ಎನ್ ಎನ್ ವೋಹ್ರಾ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.
ಎನ್ ಎನ್ ವೋಹ್ರಾ- ರಾಜನಾಥ್ ಸಿಂಗ್ ಭೇಟಿ
ಎನ್ ಎನ್ ವೋಹ್ರಾ- ರಾಜನಾಥ್ ಸಿಂಗ್ ಭೇಟಿ
Updated on

ನವದೆಹಲಿ:  ಜಮ್ಮು-ಕಾಶ್ಮೀರ ರಾಜ್ಯಪಾಲ ಎನ್ ಎನ್ ವೋಹ್ರಾ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. 

ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತವಿರುವುದರಿಂದ ಕೇಂದ್ರದ ಯೋಜನೆಗಳ ಜಾರಿ ಕುರಿತು ರಾಜ್ಯಪಾಲರೇ ಗೃಹ ಸಚಿವರಿಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ 80 ,000 ಕೋಟಿ ವಿಶೇಷ ಪ್ಯಾಕೇಜ್ ಜಾರಿ ಬಗ್ಗೆ ರಾಜನಾಥ್ ಸಿಂಗ್ ಅವರಿಗೆ ವೋಹ್ರಾ ಮಾಹಿತಿ ನೀಡಿದ್ದಾರೆ.

ಈ ಭೇಟಿ ವೇಳೆ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಲಾಗುತ್ತಿದೆ.  2015 ರ ನವೆಂಬರ್ 7 ರಂದು ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ 800 ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com