ಟ್ರೆಕ್ಕಿಂಗ್ ವೇಳೆ ಕಾಣೆಯಾಗಿದ್ದ ವಿದ್ಯಾರ್ಥಿಗಳು ಪತ್ತೆ

ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ಗೆಂದು ತೆರಳಿದ್ದ 8 ವಿದ್ಯಾರ್ಥಿಗಳ ಪೈಕಿ ಇದೀಗ 6 ವಿದ್ಯಾರ್ಥಿಗಳು ಸುರಕ್ಷಿತವಾಗಿ ಪತ್ತೆಯಾಗಿದ್ದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ಗೆಂದು ತೆರಳಿದ್ದ 8 ವಿದ್ಯಾರ್ಥಿಗಳ ಪೈಕಿ ಇದೀಗ 6 ವಿದ್ಯಾರ್ಥಿಗಳು ಸುರಕ್ಷಿತವಾಗಿ ಪತ್ತೆಯಾಗಿದ್ದು, ಇನ್ನಿಬ್ಬರಿರುವ ಜಾಗವನ್ನು ಪತ್ತೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಾಣೆಯಾಗಿದ್ದ ವಿದ್ಯಾರ್ಥಿಗಳು ಪಂಜಾಬಿನ ಸಂಗ್ರೂರಿನವರಾಗಿದ್ದು, ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದಾರೆ. ಮಾರ್ಚ್ 8 ರಂದು ಈ ವಿದ್ಯಾರ್ಥಿಗಳು ಕಾಲೇಜಿನ ಆಡಳಿತ ಮಂಡಳಿಗೆ ತಿಳಿಸದೆಯೇ ಟ್ರೆಕ್ಕಿಂಗ್ ಹೋಗಿ ನಾಪತ್ತೆಯಾಗಿದ್ದರು. ಹೀಗಾಗಿ ಶೋಧ ಕಾರ್ಯಾಚರಣೆಗೆ ತಂಡವೊಂದುನ್ನು ರಚನೆ ಮಾಡಲಾಗಿತ್ತು.

ಇದರಂತೆ ಅಧಿಕಾರಿಗಳ ತಂಡ ಇದೀಗ 8 ವಿದ್ಯಾರ್ಥಿಗಳ ಪೈಕಿ ಆರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದು, ಹವಾಮಾನ ವೈಪರೀತ್ಯದಿಂದಾದಿ ಇನ್ನಿಬ್ಬರು ವಿದ್ಯಾರ್ಥಿಗಳ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಶೀಘ್ರದಲ್ಲೇ ಅವರನ್ನು ರಕ್ಷಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com