
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ದ್ವಿಪೌರತ್ವ ವಿವಾದಕ್ಕೆ ಸಂಬಂಧಿಸಿ ಸಂಸದೀಯ ಸಮಿತಿ ರಾಹುಲ್ ಅವರಿಗೆ ನೋಟಿಸ್ ಜಾರಿ ಮಾಡಿರುವುದಾಗಿ ಸೋಮವಾರ ತಿಳಿದುಬಂದಿದೆ.
ತಾವು ಬ್ರಿಟಿಷ್ ನಾಗರಿಕ ಎಂದು ರಾಹುಲ್ ಗಾಂಧಿ ಅವರು ಘೋಷಿಸಿಕೊಂಡಿದ್ದಾರೆಂದು ಆರೋಪಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳ ಸಂಬಂಧ ಸ್ಪಷ್ಟನೆ ನೀಡುವಂತೆ ಎಲ್.ಕೆ. ಅಡ್ವಾಣಿ ನೇತೃತ್ವದ ಸಂಸದೀಯ ನೀತಿ ಸಮಿತಿ ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗುತ್ತಿದೆ.
ನೋಟಿಸ್ ನಲ್ಲಿ ತಾವು ಬ್ರಿಟಿಷ್ ನಾಗರಿಕ ಎಂದು ಘೋಷಣೆ ಮಾಡಿರುವುದು ನಿಜವೇ? ನಿಜವೇ ಆಗಿದ್ದಲ್ಲಿ ಅದಕ್ಕೆ ಕಾರಣವೇನು? ಈ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ನಲ್ಲಿ ಕೇಳಲಾಗಿದೆ ಎಂದು ತಿಳಿದುಬಂದಿದೆ.
ನೋಟಿಸ್ ಜಾರಿಯಾಗಿರುವ ವಿಚಾರವನ್ನು ಅರ್ಜುನ್ ರಾಮ್ ಮೇಘ್ವಾಲ್ ಅವರು ಖಚಿಸಪಡಿಸಿದ್ದಾರೆ. ಪೌರತ್ವ ವಿಚಾರ ಗಂಭೀರವಾದ ವಿಷಯವಾಗಿದ್ದು, ರಾಹುಲ್ ಸ್ಪಷ್ಟನೆ ಬಳಿಕ ಸಮಿತಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ರಾಹುಲ್ ಪೌರತ್ವ ವಿಚಾರ ಕುರಿತಂತೆ ಸಂಸತ್ತಿಗೆ ದೂರು ಬಂದಿತ್ತು. ನಂತರ ದೂರನ್ನು ಸಂಸತ್ತು ಸಂಸದೀಯ ನೀತಿ ಸಮಿತಿಗೆ ಶಿಫಾರಸ್ಸು ಮಾಡಿದ್ದು. ಇದೀಗ ನೀತಿ ಸಮಿತಿ ರಾಹೂಲ್ ಬ್ರಿಟಿಷ್ ಪೌರತ್ವ ಆರೋಪ ಕುರಿತಂತೆ ಸ್ಪಷ್ಟನೆ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ರಾಹುಲ್ ಪೌರತ್ವ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದರು. ಪತ್ರದಲ್ಲಿ ರಾಹುಲ್ ಇಂಗ್ಲೆಂಡ್ ನಲ್ಲಿ ಕಂಪನಿಯೊಂದನ್ನು ಆರಂಭಿಸಲು ತಮ್ಮನ್ನು ಬ್ರಿಟಿಷ್ ಪ್ರಜೆಯೆಂದು ಘೋಷಿಸಿಕೊಂಡಿದ್ದಾರೆಂದು ಆರೋಪಿಸಿದ್ದರು. ಅಲ್ಲದೆ, ಭಾರತದ ಪೌರತ್ವವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದರು. ಆದರೆ, ಈ ಆರೋಪವನ್ನು ಕಾಂಗ್ರೆಸ್ ತಿರಸ್ಕರಿಸಿತ್ತು. ನಂತರ ಬಿಜೆಪಿ ಸಂಸದ ಮಹೇಶ್ ಗಿರಿ ಯವರು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಪತ್ರವನ್ನು ಬರೆದಿದ್ದ. ಸುಮಿತ್ರಾ ಮಹಾಜನ್ ಅವರು ಪ್ರಕರಣವನ್ನು ಅಡ್ವಾಣಿ ನೇತೃತ್ವದ ನೈತಿಕ ಸಮಿತಿಗೆ ಇದನ್ನು ವಹಿಸಿದ್ದರು.
Advertisement