

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿ ವಿದೇಶಕ್ಕೆ ಹಾರಿದ್ದ ಮದ್ಯದ ದೊರೆ ವಿಜಯ್ ಮಲ್ಯ ಅವರ ವಿವಾದ ಇದೀಗ ಸಂಸತ್ತಿನಲ್ಲಿ ಗದ್ದಲವನ್ನುಂಟು ಮಾಡಿದ್ದು, ವಿವಾದ ಕುರಿತಂತೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮಲ್ಯ ವಿವಾದ ಕುರಿತಂತೆ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರು ಪಂಚ ಪ್ರಶ್ನೆಗಳನ್ನು ಹಾಕಿದ್ದಾರೆ. ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಅವರು, ಕಪ್ಪುಹಣವನ್ನು ದೇಶಕ್ಕೆ ಮರಳಿ ತರುವ ಬದಲು ಕೇಂದ್ರ ಸರ್ಕಾರ ವಿಜಯ್ ಮಲ್ಯ ಹಾಗೂ ಲಲಿತ್ ಮೋದಿಯವರನ್ನೇ ದೇಶ ಬಿಟ್ಟು ಹೋಗಲು ದಾರಿ ಮಾಡಿಕೊಟ್ಟಿದೆ ಎಂದು ಆರೋಪಿಸಿದರು. ಅಲ್ಲದೆ, ಕೇಂದ್ರ ಸರ್ಕಾರಕ್ಕೆ ಮಲ್ಯ ವಿವಾದಕ್ಕೆ ಸಂಬಂಧಿಸಿ ಉತ್ತರ ನೀಡುವಂತೆ 5 ಪ್ರಶ್ನೆಗಳನ್ನು ಹಾಕಿದ್ದಾರೆ.