ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರೊಂದಿಗೆ ವಿಜಯ್ ಕುಮಾರ್ (This picture was tweeted by@cinema_updatesz)
ದೇಶ
ತಮಿಳು ನಟ ವಿಜಯ್ ಕುಮಾರ್ ಬಿಜೆಪಿ ಸೇರ್ಪಡೆ
ತಮಿಳುನಾಡು ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಸುಮಾರು 800 ಚಿತ್ರಗಳಲ್ಲಿ ಅಭಿನಯಿಸಿರುವ ದಕ್ಷಿಣ...
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಸುಮಾರು 800 ಚಿತ್ರಗಳಲ್ಲಿ ಅಭಿನಯಿಸಿರುವ ದಕ್ಷಿಣ ಭಾರತದ ಹಿರಿಯ ನಟ ವಿಜಯ್ ಕುಮಾರ್ ಅವರು ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇಂದು ಚೆನ್ನೈನಲ್ಲಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರ ನೇತೃತ್ವದಲ್ಲಿ ಬಹುಭಾಷಾ ನಟ ವಿಜಯ್ ಕುಮಾರ್ ಅವರು ಬಿಜೆಪಿ ಸೇರಿದರು.
ಅಧಿಕೃತವಾಗಿ ಬಿಜೆಪಿ ಸೇರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯ್ ಕುಮಾರ್ ಅವರು, ಬಿಜೆಪಿ ಹೈಕಮಾಂಡ್ ಸಲಹೆಯಂತೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡುವುದಾಗಿ ತಿಳಿಸಿದರು.
ನಾನು ಹಲವು ಪ್ರಾದೇಶಿಕ ಭಾಷೆಗಳಲ್ಲಿ ಅಭಿನಯಿಸಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಿರಪರಿಚಿತ. ಇನ್ನು ತಮಿಳುನಾಡಿನ ಜನತೆಗೆ ನನ್ನ ಬಗ್ಗೆ ಚೆನ್ನಾಗಿ ಗೊತ್ತು ಎಂದು ವಿಜಯ್ ಕುಮಾರ್ ಹೇಳಿದ್ದಾರೆ.
ಇದೇ ವೇಳೆ ವಿಜಯ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಹಲವು ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ