ಇಸಿಸ್ ಕೈಗೊಂಬೆ ಪಾಕ್ ಜೊತೆ ಮಾತುಕತೆಯಿಂದ ಸಮಯ ವ್ಯರ್ಥ: ಸುಬ್ರಮಣಿಯನ್

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು, ಇಸಿಸ್ ಕೈಗೊಂಬೆಯಾಗಿರುವ ಪಾಕಿಸ್ತಾನದ ಜೊತೆ ಮಾತುಕತೆ...
ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ
Updated on: 
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಸಾರ್ಕ್ ಶೃಂಗಸಭೆಯಲ್ಲಿ ಪಾಕಿಸ್ತಾನ ಪ್ರಧಾನಿಯವರ ವಿದೇಶ ವ್ಯವಹಾರ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಅವರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ, ಇದಕ್ಕೆ ಪ್ರತಿಕ್ರಯಿಸಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು, ಇಸಿಸ್ ಕೈಗೊಂಬೆಯಾಗಿರುವ ಪಾಕಿಸ್ತಾನದ ಜೊತೆ ಮಾತುಕತೆ, ಸಮಯದ ವ್ಯರ್ಥ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ತಾನ ತನ್ನ ಮಿಲಿಟರಿ ಮತ್ತು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರ ಸಂಘಟನೆಗಳ ಕೈಗೊಂಬೆ. ಅವರ ತಾಳಕ್ಕೆ ತಕ್ಕಂತೆ ಪಾಕಿಸ್ತಾನದ ಸರ್ಕಾರ ನಡೆಯುತ್ತದೆ. ಹೀಗಿರಬೇಕಾದರೆ, ಅವರೊಂದಿಗೆ ಮಾತುಕತೆ ನಡೆಸೋದು ಸಮಯದ ವ್ಯರ್ಥವಾಗುತ್ತದೆ ಹೊರತು ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಸ್ವಾಮಿ ಹೇಳಿದ್ದಾರೆ. 
ಮಾರ್ಚ್ 16 ಹಾಗೂ 17ರಂದು ನೇಪಾಳದಲ್ಲಿ ಸಾರ್ಕ್ ರಾಷ್ಟ್ರಗಳ ಸಚಿವರ ಸಭೆ ನಡೆಯಲಿದ್ದು, ಅಜೀಜ್ ಹಾಗೂ ಸುಷ್ಮಾ ಸ್ವರಾಜ್ ಅವರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಪಟಾಣ್ ಕೋಟ್ ದಾಳಿ ಕುರಿತು ಸುಷ್ಮಾ ಅವರು ಅಜೀಜ್ ಅವರೊಂದಿಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com