

ಪಾಟ್ನ: ಪ್ರಧಾನಿ ನರೇಂದ್ರ ಮೋದಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರ ಬಗ್ಗೆ ಮಾತನಾಡಿರುವ ಬಿಜೆಪಿ ನಾಯಕ ಶತೃಘ್ನ ಸಿನ್ಹಾ, ಪ್ರಧಾನಿ ಮೋದಿ ತಮ್ಮ ರಾಜಕೀಯ ವಿರೋಧಿಗಳ ನಡುವಿನ ಅಂತರವನ್ನು ಕಡಿಮೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೋದಿ- ನಿತೀಶ್ ಕುಮಾರ್ ಒಂದೇ ವೇದಿಕೆ ಹಂಚಿಕೊಂಡ ಬಗ್ಗೆ ಟ್ವೀಟ್ ಮಾಡಿರುವ ಸಿನ್ಹಾ, " ನಮ್ಮ ಸಮರ್ಥ, ಕ್ರಿಯಾತ್ಮಕ ಪ್ರಧಾನಿ ಮೋದಿ, ತಮ್ಮ ರಾಜಕೀಯ ವಿರೋಧಿಗಳ ನಡುವಿನ ಅಂತರವನ್ನು ಕಡಿಮೆ ಮಾಡಿಕೊಳ್ಳಲು ಯತ್ನಿಸುತಿದ್ದಾರೆ ಈ ಮೂಲಕ ರಾಜಕೀಯ ವಿರೋಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿರುವುದು ಸಂತಸದ ವಿಷಯ ಎಂದಿದ್ದಾರೆ.
ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವಾಗದೇ ಇದ್ದಕ್ಕೆ ಕ್ಷಮೆ ಕೋರಿರುವ ಸಿನ್ಹಾ, ಬಿಹಾರದ ಅಭಿವೃದ್ಧಿ ದೃಷ್ಟಿಯಿಂದ ನಾನು ಕಾರ್ಯಕ್ರಮದಲ್ಲಿ ಪ್ರಧಾನಿ ಅವರೊಂದಿಗೆ ಭಾಗವಹಿಸಬೇಕಿತ್ತು ಎಂದು ಹೇಳಿದ್ದಾರೆ.