ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳಿಗೆ ಬಾಂಬ್ ಬೆದರಿಕೆ

ಎರಡು ವಿಮಾನಗಳಿಗೆ ಬೆಳಗ್ಗೆ ಸುಮಾರು 10 ಗಂಟೆ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ದೆಹಲಿಯ...
ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣ
ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣ

ನವದೆಹಲಿ: ಎರಡು ವಿಮಾನಗಳಿಗೆ ಬೆಳಗ್ಗೆ ಸುಮಾರು 10 ಗಂಟೆ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ವಿಮಾನ ನಿಲ್ದಾಣಕ್ಕೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ ಎಂದು ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಕಠ್ಮಂಡುವಿಗೆ ಹೊರಟ ನೇಪಾಳ ಏರ್ಲೈನ್ಸ್ ವಿಮಾನ ಮತ್ತು ಭುವನೇಶ್ವರ್ ಗೆ ಹೊರಟ ಏರ್ ಇಂಡಿಯಾ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಬೇರೆ ವಿಮಾನಕ್ಕೆ ಸ್ಥಳಾಂತರಿಸಲಾಯಿತು.
ಭುವನೇಶ್ವರ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ನಾಲ್ವರು ಸಂಸದರಿದ್ದರು.
ಬಾಂಬ್ ಬೆದರಿಕೆ ಕರೆ ಬಂದ ನಂತರ ಪ್ರಯಾಣಿಕರನ್ನೆಲ್ಲಾ ಇಳಿಸಿ ನೇಪಾಳ ಏರ್ ಲೈನ್ಸ್ ಆರ್ ಎ 206 ಮತ್ತು ಏರ್ ಇಂಡಿಯಾ 075 ವಿಮಾನಗಳನ್ನು ಬೇರೆ ಸ್ಥಳಕ್ಕೆ ಕೊಂಡೊಯ್ಡು ತಪಾಸಣೆ ನಡೆಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com