ಮಾ.23ಕ್ಕೆ ಕನ್ಹಯ್ಯಾ ಜಾಮೀನು ರದ್ದು ಅರ್ಜಿ ವಿಚಾರಣೆ

ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದನ್ನು...
ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್
ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್
ನವದೆಹಲಿ: ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದನ್ನು ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಿದ್ ಅರ್ಜಿಯ ವಿಚಾರಣೆಯನ್ನು ಮಾರ್ಚ್ 23ಕ್ಕೆ ನಿಗದಿಪಡಿಸಲಾಗಿದೆ.
ದೆಹಲಿ ಹೈಕೋರ್ಟ್ ನ ನ್ಯಾಯಾಮೂರ್ತಿ ಸುರೇಶ್ ಕೈಟ್ ಅವರು  ಮಾರ್ಚ್ 23ಕ್ಕೆ ಕನ್ಹಯ್ಯಾ ಜಾಮೀನು ರದ್ದು ಅರ್ಜಿ ವಿಚಾರಣೆ  ನಡೆಸುವುದಾಗಿ ತಿಳಿಸಿದ್ದಾರೆ. 
ಮಂಗಳವಾರ ಮಧ್ಯಂತ ಜಾಮೀನು ರದ್ದು ಮಾಡಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ, ಪ್ರತಿಭಾ ರಾಣಿ ಬುಧವಾರ ಮುಖ್ಯ ನ್ಯಾಯಾಮೂರ್ತಿಗೆ ಅವರಿಗೆ ಶಿಫಾರಸು ಮಾಡಿದ್ದರು.
ಗುರುವಾರ ನ್ಯಾ.ಸುರೇಶ್ ಕೈಟ್ ಅವರು ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮಾರ್ಚ್ 23ಕ್ಕೆ ನಿಗದಿಪಡಿಸಿದ್ದಾರೆ. ಆದರೆ, ನ್ಯಾಯಮೂರ್ತಿಗಳ ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲರು, ಮಾರ್ಚ್ 21ಕ್ಕೆ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಆದರೆ, ವಕೀಲರ ಮನವಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com