ರಾಜ್ಯಸಭಾ ಚುನಾವಣೆಯಲ್ಲಿ 'ಸಂಖ್ಯಾ ಬಲ' ಬದಲಾವಣೆ ಜಿಎಸ್ ಟಿ ಮಸೂದೆ ಅಂಗೀಕಾರಕ್ಕೆ ಸಹಕಾರಿ: ಅರುಣ್ ಜೇಟ್ಲಿ

ರಾಜ್ಯಸಭಾ ಚುನಾವಣೆಯಲ್ಲಿ ಸರ್ಕಾರಕ್ಕೆ ಹೆಚ್ಚು ಬಹುಮತ ಸಿಗಲಿರುವುದರಿಂದ ಜಿಎಸ್ ಟಿ ಮಸೂದೆ ಅಂಗೀಕಾರ ಸುಲಭವಾಗಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
Updated on: 

ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಸರ್ಕಾರಕ್ಕೆ ಹೆಚ್ಚು ಬಹುಮತ ಸಿಗಲಿರುವುದರಿಂದ ಜಿಎಸ್ ಟಿ ಮಸೂದೆ ಅಂಗೀಕಾರ ಸುಲಭವಾಗಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಚುನಾವೆಣೆಯಲ್ಲಿ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಹೆಚ್ಚಿನ ಸ್ಥಾನ ಸಿಗಲಿದೆ, ಜಿಎಸ್ ಟಿ ಮಸೂದೆಗೆ ಒಂದು ಪಕ್ಷವನ್ನು ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳೂ ಬೆಂಬಲಿಸುವುದಾಗಿ ತಿಳಿಸಿವೆ. ಚುನಾವಣೆಯ ನಂತರ ರಾಜ್ಯಸಭೆಯಲ್ಲಿ ಸರ್ಕಾರಕ್ಕೆ ಹೆಚ್ಚಿನ ಸದಸ್ಯರ ಬೆಂಬಲ ಸಿಗಲಿರುವುದರಿಂದ ಜಿಎಸ್ ಟಿ ಮಸೂದೆ ಜಾರಿಯಾಗಲಿದೆ ಎಂದು ಜೇಟ್ಲಿ ತಿಳಿಸಿದ್ದಾರೆ.  

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಸೂದೆ ಜಿಎಸ್ ಟಿ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ಸಂಸತ್ ನ ಮೇಲ್ಮನೆಯಲ್ಲಿ ಅಂಗೀಕಾರವಾಗಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com