ಹುಲಿಯ ಚರ್ಮ, ಮೂಳೆಯನ್ನು ಕಳ್ಳಸಾಗಣೆ ಮಾಡುತ್ತಿದ್ದ ನಾಲ್ವರ ಬಂಧನ

ಹುಲಿಯ ಚರ್ಮ ಮತ್ತು ಮೂಳೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ನಾಲ್ವರನ್ನು ಅರಣ್ಯ ಅಧಿಕಾರಿಗಳು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಲಕೊಬ: ಹುಲಿಯ ಚರ್ಮ ಮತ್ತು ಮೂಳೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ನಾಲ್ವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ಜಲ್ ಪೈಗುರಿ ಜಿಲ್ಲೆಯ ಬೆಲಕೊಬ ವಲಯದಲ್ಲಿ ರಾಯಲ್ ಬೆಂಗಾಲ್ ಟೈಗರಗಳ ಚರ್ಮ ಮತ್ತು ಮೂಳೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಬೇಟೆಗಾರರನ್ನು ಬಂಧಿಸಲಾಗಿದೆ.
ಬಂಧಿತರಿಂದ 11 ಅಡಿ ಉದ್ದದ ಹುಲಿ ಚರ್ಮ ಹಾಗೂ ಹುಲಿಯ 88 ಮೂಳೆ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆಯಷ್ಟೇ ಚಿರತೆಯನ್ನು ಕೊಂದು, ಅದರ ಭಾಗಗಳನ್ನು ಮಾರಾಟ ಮಾಡುತ್ತಿದ್ದ ಐವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ. 
ಸರ್ಕಾರದ ವರದಿಗಳ ಪ್ರಕಾರ 2016 ಮಾರ್ಚ್ 9 ರವರೆಗೆ ನಾಲ್ಕು ಹುಲಿಗಳನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com