ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು
ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು

ಅಸಾರಾಮ್ ಪ್ರಕರಣ: ಅತ್ಯಾಚಾರ ಸಂತ್ರಸ್ತೆ ತಂದೆಗೆ ಜೀವ ಬೆದರಿಕೆ ಕರೆ

ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅತ್ಯಾಚಾರ ಸಂತ್ರಸ್ತೆ ತಂದೆಗೆ ಬೆದರಿಕೆ ಕರೆ ಬಂದಿರುವುದಾಗಿ ಭಾನುವಾರ...

ಷಹಜಹಾನ್ಪುರ: ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅತ್ಯಾಚಾರ ಸಂತ್ರಸ್ತೆ ತಂದೆಗೆ ಬೆದರಿಕೆ ಕರೆ ಬಂದಿರುವುದಾಗಿ ಭಾನುವಾರ ತಿಳಿದುಬಂದಿದೆ.

ಈ ಕುರಿತಂತೆ ಮಾತನಾಡಿರುವ ಅತ್ಯಾಚಾರ ಸಂತ್ರಸ್ತೆ ತಂದೆ,  ನಿನ್ನೆ ನನ್ನ ಮೊಬೈಲ್ ಫೋನ್ ಗೆ ಕರೆಯೊಂದು ಬಂದಿತ್ತು. ಕರೆ ಮಾಡಿದ ವ್ಯಕ್ತಿ ಬಾಪೂ ವಿರುದ್ಧ ದಾಖಲು ಮಾಡಿರುವ ಪ್ರಕರಣವನ್ನು ಹಿಂಪಡೆಯದಿದ್ದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರ ಬಳಿ ಹೇಳಿಕೊಂಡಿದ್ದಾರೆ.

ಇದೀಗ ಈ ಬೆದರಿಕೆ ಕರೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಅವರು, ಸಂತ್ರಸ್ತೆ ಕುಟುಂಬಕ್ಕೆ ಮತ್ತಷ್ಟು ಭದ್ರತೆಯನ್ನು ಒದಗಿಸಲಾಗಿದ್ದು, ಬೆದರಿಕೆ ಕರೆ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com