ಚುನಾಯಿತ ಸರ್ಕಾರವನ್ನು ಹಣಬಲ, ತೋಳ್ಬಲಗಳಿಂದ ಉರುಳಿಸುವುದು ಬಿಜೆಪಿಯ ಹೊಸ ಮಾದರಿ: ರಾಹುಲ್ ಗಾಂಧಿ ಆರೋಪ

ಉತ್ತರಾಖಂಡದಲ್ಲಿನ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
Updated on: 

ನವದೆಹಲಿ: ಉತ್ತರಾಖಂಡದಲ್ಲಿನ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮೇಲೆ ಹರಿಹಾಯ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಇದು ಮೋದಿಯವರ ಬಿಜೆಪಿಯ ನಿಜವಾದ ಬಣ್ಣ ಬಯಲು ಮಾಡಿದೆ. ಕಾಂಗ್ರೆಸ್ ಈ ಪುಢಾರಿತನದ ವಿರುದ್ಧ ಪ್ರಜಾಪ್ರಭುತ್ವ ಮಾದರಿಯಲ್ಲಿ ಹೋರಾಟ ನಡೆಸಲಿದೆ ಎಂದು ಹೇಳಿದರು.

ವಿವಾದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ವಿರುದ್ಧ ಟ್ವಿಟ್ಟರ್ ನಲ್ಲಿ ಸರಣಿ ಆರೋಪಗಳನ್ನು ಮಾಡಿದ ಅವರು ಬಿಹಾರ ವಿಧಾನಸಭೆಯ ಚುನಾವಣೆಯಲ್ಲಿ ಸೋತ ನಂತರ ಹಣಬಲ, ತೋಳ್ಬಲಗಳಿಂದ ಕುದುರೆ ವ್ಯಾಪಾರದಲ್ಲಿ ತೊಡಗಿ ಚುನಾಯಿತ ಸರ್ಕಾರವನ್ನು ಉರುಳಿಸುವುದು ಬಿಜೆಪಿಯ ಹೊಸ ಮಾದರಿಯಾದಂತೆ ಕಾಣಿಸುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯ ಫುಡಾರಿತನ ವಿರುದ್ಧ ಪ್ರಜಾಪ್ರಭುತ್ವ ಮಾದರಿಯಲ್ಲಿ ಹೋರಾಟ ನಡೆಸಲಿದೆ. ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರುದ್ಧ ಮೊದಲ ಅರುಣಾಚಲ ಪ್ರದೇಶದಲ್ಲಿ ದಾಳಿ ನಡೆಸಲಾಯಿತು, ಈಗ ಉತ್ತರಾಖಂಡದಲ್ಲಿ. ಇದು ಮೋದಿಯವರ ಬಿಜೆಪಿಯ ನಿಜವಾದ ಮುಖ ಎಂದು ಹೇಳಿದ್ದಾರೆ.

ಹರೀಶ್ ರಾವತ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತರಾಖಂಡದಲ್ಲಿ ಎರಡು ದಿನಗಳ ಹಿಂದೆ ಸಮಸ್ಯೆಯಲ್ಲಿ ಬಿದ್ದಿದ್ದು, 9 ಮಂದಿ ಶಾಸಕರು ಸರ್ಕಾರದ ವಿರುದ್ದ ತಿರುಗಿ ಬಿದ್ದರು. ಇದೇ ಸಮಯದಲ್ಲಿ ಬಿಜೆಪಿ ರಾಜ್ಯಪಾಲರ ಬಳಿ ತೆರಳಿ ಸರ್ಕಾರ ರಚಿಸಲು ಅವಕಾಶ ಕೋರಿತ್ತು. ರಾಜ್ಯಪಾಲ ಕೃಷ್ಣಕಾಂತ್ ಪೌಲ್, ಈ ತಿಂಗಳ 28ರೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾವತ್ ಅವರಿಗೆ ಸೂಚಿಸಿದ್ದಾರೆ.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ  9 ಮಂದಿ ಬಂಡಾಯ ಕಾಂಗ್ರೆಸ್ ಶಾಸಕರ ಬೆಂಬಲದೊಂದಿಗೆ 35 ಶಾಸಕರ ಬೆಂಬಲ ಪಡೆದು ಬಿಜೆಪಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದೆ. ರಾವತ್ ಅವರ ಸಚಿವಾಲಯ ಅಲ್ಪಸಂಖ್ಯೆಗಿಳಿದಿದೆ ಎಂದು ರಾಜ್ಯಪಾಲರ ಭೇಟಿ ಸಂದರ್ಭದಲ್ಲಿ ತಿಳಿಸಿತ್ತು.

ಆದರೆ ಬಂಡಾಯ ಶಾಸಕರು ಕಾಂಗ್ರೆಸ್ ನ್ನು ಅಥವಾ ಕಾಂಗ್ರೆಸ್ ಶಾಸನ ಪಕ್ಷವನ್ನು ತೊರೆಯದಿರುವುದರಿಂದ ತಾವಿನ್ನೂ ಬಹುಮತ ಹೊಂದಿರುವುದಾಗಿ ರಾವತ್ ಹೇಳಿದ್ದಾರೆ. ಐದು ಮಂದಿ ಬಂಡಾಯಗಾರರು ಇನ್ನೂ ಕೂಡ ತಮ್ಮ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.
ಪಕ್ಷಾಂತರ ವಿರೋಧ ಕಾನೂನು ಜಾರಿಯಲ್ಲಿದ್ದು ಯಾರಾದರೂ ಅದನ್ನು ಉಲ್ಲಂಘಿಸಿದ್ದು ಕಂಡುಬಂದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಗೋವಿಂದ್ ಸಿಂಗ್ ಕುಂಜ್ ವಾಲ್ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಆಪಾದಿಸಿದ್ದ ಕಾಂಗ್ರೆಸ್ ಪಕ್ಷ ಹಣ ಮತ್ತು ರಾಜಕೀಯ ಬಲದಿಂದ ಬಿಜೆಪಿಯೇತರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಪಿತೂರಿ ನಡೆಸಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಯತ್ನಿಸುತ್ತಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲ ಸುರ್ಜೆವಾಲಾ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com