ಕನ್ಹಯ್ಯ ಕುಮಾರ್ ನ ಭಗತ್ ಸಿಂಗ್ ಗೆ ಹೋಲಿಕೆ: ಶಶಿ ತರೂರ್ ಕ್ಷಮಾಪಣೆಗೆ ಬಿಜೆಪಿ ಆಗ್ರಹ

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರನ್ನು ಸ್ವಾತಂತ್ರ್ಯ...
ಶಶಿ ತರೂರ್
ಶಶಿ ತರೂರ್
Updated on: 
ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರಿಗೆ ಹೋಲಿಕೆ ಮಾಡಿದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ದೇಶದ ಕ್ಷಮೆಯಾಚಿಸಬೇಕು ಎಂದು ಸೋಮವಾರ ಬಿಜೆಪಿ ಆಗ್ರಹಿಸಿದೆ.
ದೇಶ ವಿರೋಧಿ ಘೋಷಣೆ ಕೂಗಿದ ವ್ಯಕ್ತಿಯನ್ನು ಯಾವತ್ತೂ ಒಬ್ಬ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರನಿಗೆ ಹೋಲಿಕೆ ಮಾಡಬಾರದು ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯಾ ಅವರು ಹೇಳಿದ್ದಾರೆ.
'ಭಾರತ್ ತೆರೆ ತುಕ್ಡೆ ಹೊಂಗೆ, ಇನ್ಶಾ ಅಲ್ಹಾ, ಇನ್ಶಾ ಅಲ್ಲಾ' ಎಂದು ಘೋಷಣೆ ಕೂಗುವವರನ್ನು ಭಗತ್ ಸಿಂಗ್ ಹೋಲಿಕೆ ಮಾಡಬೇಡಿ ಎಂದು ನಾನು ಶಶಿ ತರೂರ್ ಅವರಲ್ಲಿ ಕೇಳಿಕೊಳ್ಳುತ್ತೇನೆ ಮತ್ತು ಅವರಿಗೆ ಅಗೌರವ ತೋರಬೇಡಿ ಎಂದು ಮನವಿ ಮಾಡುವುದಾಗಿ ವಿಜಯ್ ವರ್ಗಿಯಾ ಹೇಳಿದ್ದಾರೆ. ಅಲ್ಲದೆ ಅವರು ಈ ಕೂಡಲೇ ದೇಶದ ಕ್ಷಮೆ ಕೇಳಬೇಕು ಎಂದಿದ್ದಾರೆ. 
ಜೆಎನ್ ಯುನಲ್ಲಿ ಆಯೋಜಿಸಿದ್ದ ಜೆಎನ್ ಯು ಹಾಗೂ ರಾಷ್ಟ್ರೀಯತೆ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ಶಶಿತರೂರ್ ಅವರು, ಕನ್ಹಯ್ಯ ಕುಮಾರ್ ಅವರನ್ನು ಭಗತ್ ಸಿಂಗ್ ಗೆ ಹೋಲಿಕೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com