ಅಕ್ರಮ ಸಂಬಂಧ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ಕುಮಾರ್ ವಿಶ್ವಾಸ್

ತಮ್ಮ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಪಟಿಯಾಲ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ...
ಕುಮಾರ್ ವಿಶ್ವಾಸ್
ಕುಮಾರ್ ವಿಶ್ವಾಸ್
Updated on: 
ನವದೆಹಲಿ: ತಮ್ಮ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಪಟಿಯಾಲ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ(ಎಎಪಿ) ಮುಖಂಡ ಕುಮಾರ್ ವಿಶ್ವಾಸ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆ ಜೊತೆ ಅಕ್ರಮ ಸಂಬಂಧ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರ್ ವಿಶ್ವಾಸ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಪಟಿಯಾಲ ಕೋರ್ಟ್ ಆದೇಶಿಸಿತ್ತು.
2014ರ ಲೋಕಸಭೆ ಚುನಾವಣೆ ವೇಳೆಯಲ್ಲಿ ಕುಮಾರ್ ವಿಶ್ವಾಸ್ ಪಕ್ಷದ ಕಾರ್ಯಕರ್ತೆ ಜೊತೆ ಅಕ್ರಮ ಸಂಬಂಧ ಹೊಂದಿದ್ದರು ಎಂಬುದು ಆರೋಪವಾಗಿದೆ. ಲೋಕಸಭೆ ಚುನಾವಣೆಗೆ ಕುಮಾರ್ ವಿಶ್ವಾಸ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. 
ಅಜಯ್ ವೋಹರಾ ಎನ್ನುವವರು ಅಮೇಥಿಯಲ್ಲಿನ ಆಪ್ ಕಾರ್ಯಕರ್ತೆ ಜೊತೆ ಕುಮಾರ್ ವಿಶ್ವಾಸ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರಿಗೆ ದೂರು ನೀಡಿದ್ದರು. ಆದರೆ, ಈ ಆರೋಪವನ್ನು ಕುಮಾರ್ ವಿಶ್ವಾಸ್ ತಳ್ಳಿ ಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com