ಫರ್ಗ್ಯೂಸನ್ ಕಾಲೇಜಿನಲ್ಲಿ ದೇಶವಿರೋಧಿ ಘೋಷಣೆ: ಪೊಲೀಸರಿಗೆ ಪ್ರಾಂಶುಪಾಲರಿಂದ ದೂರು

ಪುಣೆಯ ಫರ್ಗ್ಯೂಸನ್ ಕಾಲೇಜಿನಲ್ಲಿ ದೇಶವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರೇ ಪೊಲೀಸರಿಗೆ ದೂರು ನೀಡಿದ್ದಾರೆ.
ಫರ್ಗ್ಯೂಸನ್ ಕಾಲೇಜು
ಫರ್ಗ್ಯೂಸನ್ ಕಾಲೇಜು
Updated on
ಪುಣೆ: ಪುಣೆಯ ಫರ್ಗ್ಯೂಸನ್ ಕಾಲೇಜಿನಲ್ಲಿ ದೇಶವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರೇ ಪೊಲೀಸರಿಗೆ ದೂರು ನೀಡಿದ್ದಾರೆ. 
ಮಾ.22 ರಂದು ಕಾಲೇಜಿನ ಆವರಣದಲ್ಲಿ ದೇಶವಿರೋಧಿ ಘೋಷಣೆ ಕೇಳಿಬಂದಿದ್ದು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ರವೀಂದ್ರ ಸಿಂಗ್ ಮನವಿ ಮಾಡಿದ್ದಾರೆ. 
ಟ್ರುಥ್ ಆಫ್ ಜೆಎನ್ ಯು ಎಂಬ ವಿಷಯದ ಬಗ್ಗೆ ಫರ್ಗ್ಯೂಸನ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಬಿವಿಪಿ ಕಾರ್ಯಕರ್ತರು, ಎಡ ಸಂಘಟನೆಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಜೆಎನ್ ಯು ವಿದ್ಯಾರ್ಥಿ ಸಂಘಟನೆ ನಾಯಕ ಕನ್ಹಯ್ಯ ಕುಮಾರ್ ಪರ ಘೋಷಣೆ ಕೂಗಿದ್ದಾರೆ. ಇದೇ ಸಂದರ್ಭದಲ್ಲಿ ದೇಶವಿರೋಧಿ ಘೋಷಣೆ ಕೇಳಿಬಂದಿದೆ ಎಂಬ ಆರೋಪವಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com