ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ

ಇಂಡಿಗೋ ವಿಮಾನ ಸಂಸ್ಥೆಯ 10 ವಿಮಾನಗಳಿಗೆ ಆಗಂತುಕರು ಬಾಂಬ್ ಬೆದರಿಕೆಯೊಡ್ಡಿದ್ದಾರೆ. ಈ ಹಿನ್ನಲೆಯಲ್ಲಿ ಶ್ರೀನಗರ-
IndiGo
IndiGo
Updated on: 
ನವದೆಹಲಿ: ಇಂಡಿಗೋ ವಿಮಾನ ಸಂಸ್ಥೆಯ 10 ವಿಮಾನಗಳಿಗೆ ಆಗಂತುಕರು ಬಾಂಬ್ ಬೆದರಿಕೆಯೊಡ್ಡಿದ್ದಾರೆ. ಈ ಹಿನ್ನಲೆಯಲ್ಲಿ ಶ್ರೀನಗರ -ದೆಹಲಿ ನಡುವಿನ 6E853ವಿಮಾನ ಸಂಜೆ 3 ಗಂಟೆಗೆ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಅಲ್ಲಿನ ಪ್ರಯಾಣಿಕರನ್ನು   ತಪಾಸಣೆಗೊಳಪಡಿಸಲಾಗಿದೆ ಎಂದು ದೆಹಲಿ ಪೊಲೀಸ್ ಡೆಪ್ಯೂಟಿ ಕಮಿಷನರ್ ದಿನೇಶ್ ಕುಮಾರ್ ಗುಪ್ತಾ ಹೇಳಿದ್ದಾರೆ.
ಮಂಗಳವಾರ ಜೆಟ್ ಏರ್‌ವೇಸ್‌ನ  5 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು.
ಚೆನ್ನೈನಲ್ಲಿರುವ ಇಂಡಿಗೋ ವಿಮಾನ ಸಂಸ್ಥೆಯ ಕಾಲ್ ಸೆಂಟರ್‌ಗೆ ಬೆಳಗ್ಗೆ ಹತ್ತು ಗಂಟೆಯ ವೇಳೆ ಈ ಬೆದರಿಕೆ ಕರೆ ಬಂದಿತ್ತು. 
ಬ್ರುಸೆಲ್ಸ್‌ನ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಹಿನ್ನಲೆಯಲ್ಲಿ ದೇಶದ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆಯನ್ನೊದಗಿಸಲಾಗಿದ್ದು, ಇದರ ನಡುವೆಯೇ ಇಂಡಿಯೋ ವಿಮಾನಕ್ಕೆ ಬೆದರಿಕೆ ಕರೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com