ಸಿಪಿಐ(ಎಂ)ನ ರಾಜಕೀಯ ಹಿಂಸೆಗೆ ಕಾಂಗ್ರೆಸ್ ರಕ್ಷಣೆ: ಅಮಿತ್ ಶಾ

ರಾಜಕೀಯ ಹಿಂಸೆಯ ಮೂಲಕ ಪ್ರಚಾರ ಮಾಡುತ್ತಿರುವ ಸಿಪಿಐ(ಎಂ) ಅನ್ನು ಕಾಂಗ್ರೆಸ್ ರಕ್ಷಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
Updated on: 

ತಿರುವನಂತರಪುರಂ: ರಾಜಕೀಯ ಹಿಂಸೆಯ ಮೂಲಕ ಪ್ರಚಾರ ಮಾಡುತ್ತಿರುವ ಸಿಪಿಐ(ಎಂ) ಅನ್ನು ಕಾಂಗ್ರೆಸ್ ರಕ್ಷಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.

ಕೇರಳದಲ್ಲಿ ಸಿಪಿಐ(ಎಂ) ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿರುವ ಅವರು, ಸಿಪಿಐ(ಎಂ) ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ, ಸಿಪಿಐ(ಎಂ)ನವರು ತಮ್ಮ ಅಸ್ತಿತ್ವವನ್ನ ಖಚಿತಪಡಿಸಿಕೊಳ್ಳುವ ಸಲುವಾಗಿ ರಾಜಕೀಯ ಹಿಂಸೆಯನ್ನು ಪ್ರಚಾರ ಮಾಡುತ್ತಿದ್ದು, ಈ ಹಿಂಸೆಯ ಪ್ರಚಾರವನ್ನು ಕಾಂಗ್ರೆಸ್ ರಕ್ಷಿಸುತ್ತಿದೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

ಇಂದು ಸಿಪಿಐ(ಎಂ) ನೆಲಕ್ಕುರುಳುತ್ತಿದ್ದು, ಹಿಂಸೆಯ ಮೂಲಕ ಮತ್ತೆ ಮೇಲೇಳಲು ಯತ್ನಿಸುತ್ತಿದೆ. ಇದಕ್ಕೆ ಬಿಜೆಪಿ ಮತಗಳ ಮೂಲಕ ಪ್ರತ್ಯುತ್ತರ ನೀಡಲಿದೆ ಎಂದು ಹೇಳಿದ್ದಾರೆ.
ಸಿಪಿಐ(ಎಂ)ನಿಂದ ರಾಜ್ಯದಲ್ಲಿ ಇಂದು ಸಾಕಷ್ಟು ಆರ್ ಎಸ್ಎಸ್- ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪುತ್ತಿದ್ದಾರೆ. ಇದನ್ನು ನಿಯಂತ್ರಿಸಬೇಕಾದರೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ಸಾರ್ವಜನಿಕರು ಪಕ್ಷಕ್ಕೆ ಬೆಂಬಲ ಸೂಚಿಸಬೇಕಿದೆ ಎಂದು ಹೇಳಿದ್ದಾರೆ.

ಮಾರ್ಚ್ 14 ರಂದು ಕಟ್ಟಿಯಿಕೊನಮ್ ನಲ್ಲಿ ಸಿಪಿಐ(ಎಂ) ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ನಡೆದ ಘರ್ಷಣೆ ವೇಳೆ ಮಾಜಿ ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷ ವಿ. ಮುರಳೀಧರನ್ ಸೇರಿ 16 ಮಂದಿ ಗಾಯಗೊಂಡಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ ಅಮಲ್ ಕೃಷ್ಣ (23) ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಗಾಯಗೊಂಡ ಕಾರ್ಯಕರ್ತರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿರುವ ಅಮಿತ್ ಶಾ ಅವರು, ಒಂದೂವರೆ ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಕಾಲಕಳೆದಿದ್ದಾರೆ. ಭೇಟಿ ವೇಳೆ ಗಾಯಗೊಂಡವರನ್ನು ಹಾಗೂ ಅವರ ಸಂಬಂಧಿಕರ ಜೊತೆ ಶಾ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com