ನವದೆಹಲಿ: ಗೂಢಚಾರಿಕೆ ಮಾಡಿದ ಆರೋಪದ ಮೇಲೆ ಪಾಕಿಸ್ತಾನದ ನೈರುತ್ಯ ಭಾಗದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಬಂಧನಕ್ಕೊಳಗಾಗಿರುವ ವ್ಯಕ್ತಿ ಭಾರತೀಯ ಗುಪ್ತಚರ ಸಂಸ್ಥೆ(ರಾ)ಯ ಅಧಿಕಾರಿ ಅಲ್ಲ. ನೌಕಾಪಡೆ ನಿವೃತ್ತ ಅಧಿಕಾರಿಯಾಗಿದ್ದು, ಭಾರತ ಸರ್ಕಾರದೊಂದಿಗೆ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ವಿದೇಶಾಂಗ ಇಲಾಖೆ ಶುಕ್ರವಾರ ಸ್ಪಷ್ಟಪಡಿಸಿದೆ.