

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್‌ನ ಟುರ್ಟುಕ್ ಪ್ರಾಂತ್ಯದಲ್ಲಿ ಹಿಮಪಾತ ಸಂಭವಿಸಿದೆ. ಹಿಮಪಾತದಲ್ಲಿ ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರ ಪೈಕಿ ಇಬ್ಬರು ನಾಪತ್ತೆಯಾಗಿದ್ದು, ಓರ್ವ ಯೋಧನನ್ನು ರಕ್ಷಿಸಲಾಗಿದ್ದು, ಮತೋರ್ವ ಯೋಧ ನಾಪತ್ತೆಯಾಗಿದ್ದಾರೆ.
ಹಿಮಪಾತಕ್ಕೆ ಸಿಲುಕಿದ ಇಬ್ಬರು ಯೋಧರ ಪೈಕಿ ಓರ್ವ ಯೋಧ ನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಆತನ ಸ್ಥಿತಿ ಗಂಭೀರವಾಗಿದೆ ಎಂದು ಸೇನಾ ವಕ್ತಾರ ಕರ್ನಲ್ ಎಸ್‌ಡಿ ಗೋಸ್ವಾಮಿ ತಿಳಿಸಿದ್ದಾರೆ.
ಇನ್ನು ನಾಪತ್ತೆಯಾದ ಯೋಧನಿಗಾಗಿ ಸೇನಾ ಪಡೆಗಳು ವ್ಯಾಪಕ ಶೋಧ ಕಾರ್ಯ ನಡೆಸುತ್ತಿವೆ.